ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಮೊದಲು ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ಮಾಡಿದ ಬೆಂಗಳೂರು ಪಡೆ, ಗುಜರಾತ್ ಟೈಟನ್ಸ್ ತಂಡವನ್ನು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳಿಗೆ ಕಟ್ಟಿಹಾಕಿತು. ಜಿಟಿ ನಾಯಕ ಶುಭಮನ್ ಗಿಲ್ ಮತ್ತು ಆರಂಭಿಕ ಆಟಗಾರ ಸಾಯಿ ಸುದರ್ಶನ್ ಪವರ್‌ಪ್ಲೇ ಅವಧಿಯಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಆರಂಭಿಕ ಆಘಾತದ ಬಳಿಕ ಸಿಕ್ಕ ಜೀವದಾನದ ಸದುಪಯೋಗ ಪಡಿಸಿಕೊಂಡ ವಾಷಿಂಗ್ಟನ್ ಸುಂದರ್ ಜವಾಬ್ದಾರಿಯುತ ಅರ್ಧಶತಕ ಬಾರಿಸಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಆರ್‌ಸಿಬಿ ಪರ ಮಾರಕ ದಾಳಿ ಸಂಘಟಿಸಿದ ರಸಿಖ್ ಸಲಾಮ್ ದಾರ್ 3 ವಿಕೆಟ್, ಅನುಭವಿ ಬೌಲರ್‌ಗಳಾದ ಜೋಶ್ ಹ್ಯಾಜಲ್‌ವುಡ್ ಮತ್ತು ಭುವನೇಶ್ವರ್ ಕುಮಾರ್ ತಲಾ 2 ವಿಕೆಟ್ ಪಡೆದು ಜಿಟಿ ಬ್ಯಾಟಿಂಗ್ ಬೆನ್ನೆಲುಬು ಮುರಿದರು.