ಯುವ ಬ್ಯಾಟಿಂಗ್ ಸೆನ್ಸೇಶನ್ ವೈಭವ್ ಸೂರ್ಯವಂಶಿ (175 ರನ್, 80 ಎಸೆತ, 15 ಬೌಂಡರಿ, 15 ಸಿಕ್ಸರ್) ಸ್ಫೋಟಕ ಶತಕದ ಸಾಹಸದಿಂದ ಭಾರತ ಕಿರಿಯರ ತಂಡ 50 ಓವರ್ಗಳಲ್ಲಿ 9 ವಿಕೆಟ್ಗೆ 411 ರನ್ ಕಲೆಹಾಕಿತು. ಪ್ರತಿಯಾಗಿ ಇಂಗ್ಲೆಂಡ್ ತಂಡ 40.2 ಓವರ್ಗಳಲ್ಲಿ 311 ರನ್ಗಳಿಗೆ ಆಲೌಟ್ ಆಗಿ ಸೋಲು ಅನುಭವಿಸಿತು. ಭಾರತ 2022ರ ಕಿರಿಯರ ವಿಶ್ವಕಪ್ನಲ್ಲೂ ಇಂಗ್ಲೆಂಡ್ ವಿರುದ್ಧವೇ ಫೈನಲ್ನಲ್ಲಿ ಗೆಲುವು ಸಾಧಿಸಿ ಪ್ರಶಸ್ತಿ ಒಲಿಸಿಕೊಂಡಿತ್ತು. 14 ವರ್ಷದ ವೈಭವ್ ಸೂರ್ಯವಂಶಿ ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿಗಳಿಗೆ ಭಾಜನರಾದರು. ಭಾರತ ಈ ಮುನ್ನ 2000, 2008, 2012, 2018 ಮತ್ತು 2022ರಲ್ಲೂ ಕಿರಿಯರ ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿತ್ತು.