ಇಷ್ಟೇ ಅಲ್ಲದೆ, ಇಡೀ ಸೀಸನ್‌ನಲ್ಲಿ ಬರೋಬ್ಬರಿ 72 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ, 2012ರ ಐಪಿಎಲ್ ಆವೃತ್ತಿಯಲ್ಲಿ ಕ್ರಿಸ್ ಗೇಲ್ ಬರೆದಿದ್ದ 59 ಸಿಕ್ಸರ್‌ಗಳ ಸುದೀರ್ಘ ದಾಖಲೆಯನ್ನು ವೈಭವ್ ಧೂಳೀಪಟ ಮಾಡಿದ್ದರು. ಕೇವಲ ಐಪಿಎಲ್ ಮಾತ್ರವಲ್ಲದೆ, ಇದೇ ವರ್ಷದ ಆರಂಭದಲ್ಲಿ ನಡೆದ ಅಂಡರ್-19 ವಿಶ್ವಕಪ್‌ನಲ್ಲೂ ಅದ್ಭುತ ಪ್ರದರ್ಶನ ನೀಡಿದ್ದ ಸೂರ್ಯವಂಶಿ, ಇಂಗ್ಲೆಂಡ್ ವಿರುದ್ಧದ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ 175 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡುವ ಮೂಲಕ ಭಾರತ ವಿಶ್ವಕಪ್ ಮುಡಿಗೇರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ದೇಶಿ ಮತ್ತು ಐಪಿಎಲ್ ಕ್ರಿಕೆಟ್‌ನಲ್ಲಿ ಸೃಷ್ಟಿಸಿರುವ ಈ ರನ್ ಸುನಾಮಿ, ಇದೀಗ ಅವರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಸಜ್ಜುಗೊಳಿಸಿದೆ, (ಏಜೆನ್ಸೀಸ್).