ಟೀಮ್ ಇಂಡಿಯಾ ದಿಗ್ಗಜ, ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಭಾರತಕ್ಕಾಗಿ ಪುರುಷರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರರಾಗಿದ್ದಾರೆ. 1989ರಲ್ಲಿ ಪಾಕಿಸ್ತಾನ ವಿರುದ್ಧ 16 ವರ್ಷ ಮತ್ತು 205 ದಿನಗಳ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅವರು, ನಂತರ ನಿರ್ಮಿಸಿದ್ದು ದಾಖಲೆಗಳ ಸುರಿಮಳೆ. ಈಗ ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧ ಟಿ20 ಕ್ಯಾಪ್ ಧರಿಸಿದರೆ, ಕೇವಲ 15ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಅತ್ಯಂತ ಕಿರಿಯ ಭಾರತೀಯ ಆಟಗಾರ ಎಂಬ ಹೊಸ ಐತಿಹಾಸಿಕ ದಾಖಲೆಯನ್ನು ವೈಭವ್ ಸೃಷ್ಟಿಸಲಿದ್ದಾರೆ.