Vaibhav Sooryavanshi : ಅಂಡರ್-19 ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ, ಬಿರುಗಾಳಿ ಸೃಷ್ಟಿಸಿದರು. ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್‌ನಲ್ಲಿ ಅಬ್ಬರಿಸಿ, ಬೊಬ್ಬಿರಿದ ವೈಭವ್, ಕೇವಲ 80 ಎಸೆತಗಳಲ್ಲಿ 15 ಬೌಂಡರಿ ಹಾಗೂ 15 ಸಿಕ್ಸರ್ ಒಳಗೊಂಡು 175 ರನ್ ಗಳಿಸಿದರು. ತಮ್ಮ ಸೂಪರ್ ಶತಕದೊಂದಿಗೆ ಟೀಮ್ ಇಂಡಿಯಾಗೆ ಅದ್ಭುತ ಗೆಲುವು ತಂದುಕೊಟ್ಟರು. ಈ ಮೂಲಕ ಟೀಮ್ ಇಂಡಿಯಾd ಅಂಡರ್ 19 ತಂಡ 6ನೇ ವಿಶ್ವ ಪ್ರಶಸ್ತಿಯನ್ನು ಗೆದ್ದಿತು.