ಬೆಂಗಳೂರು: ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ಐಪಿಎಲ್ 19ನೇ ಆವೃತ್ತಿಯ 5 ಪಂದ್ಯಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (
ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರನ್ನು
ಬಸವನಗುಡಿ ಕ್ರೀಡಾ ವೇದಿಕೆ ಹಾಗೂ ಅವರ ಅಭಿಮಾನಿಗಳ ವತಿಯಿಂದ ಇತ್ತೀಚೆಗೆ ಸನ್ಮಾನಿಸಲಾಯಿತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿರುವ ಕೆಎಸ್ಸಿಎ ಕಚೇರಿಗೆ ಭೇಟಿ ನೀಡಿ ವೆಂಕಟೇಶ್ ಪ್ರಸಾದ್ ಅವರಿಗೆ
ಹಣ್ಣಿನ ಬುಟ್ಟಿ ನೀಡಿ ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಕ್ಷಿತ್, ಮೋಹನ್, ನವೀನ್ ಜಿ ಕೆ, ಕೆ ಎಸ್ ಅಶೋಕ್ ರವರು ಭಾಗವಹಿಸಿದ್ದರು.