ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 158 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತು. ತಂಡದ ಪರ ಜವಾಬ್ದಾರಿಯುತ ಆಟವಾಡಿದ ನಾಯಕ ಶ್ರೇಯಸ್ ಅಯ್ಯರ್, 4 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ 49 ಎಸೆತಗಳಲ್ಲಿ ಅಜೇಯ 80 ರನ್ ಕಲೆಹಾಕುವ ಮೂಲಕ ಭರ್ಜರಿ ಅರ್ಧಶತಕ ಸಿಡಿಸಿ ಗಮನ ಸೆಳೆದರು. ಉಳಿದಂತೆ ಶಿವಂ ದುಬೆ (22) ಸ್ವಲ್ಪ ಮಟ್ಟಿನ ಪ್ರತಿಭೆ ತೋರಿದರು. ಆದರೆ, ವೈಭವ್ ಸೂರ್ಯವಂಶಿ (15), ಅಭಿಷೇಕ್ ಶರ್ಮಾ (16), ಇಶಾನ್ ಕಿಶನ್ (4) ಮತ್ತು ತಿಲಕ್ ವರ್ಮಾ (11) ಬ್ಯಾಟಿಂಗ್‌ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದರು. ಇಂಗ್ಲೆಂಡ್ ಪರ ಮಾರಕ ಬೌಲಿಂಗ್ ಪ್ರದರ್ಶಿಸಿದ ಜೋಫ್ರಾ ಆರ್ಚರ್ ಮತ್ತು ಜೋಶ್ ಟಾಂಗ್ ತಲಾ ಎರಡು ವಿಕೆಟ್ ಪಡೆದರೆ, ವಿಲ್ ಜಾಕ್ಸ್ ಮತ್ತು ಆದಿಲ್ ರಶೀದ್ ತಲಾ ಒಂದು ವಿಕೆಟ್ ಹಂಚಿಕೊಂಡರು.