Team India : ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ನಿನ್ನೆ (ಫೆ.23) ಜಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ನಡುವೆ ಸೂಪರ್ 8 ಪಂದ್ಯ ನಡೆಯಿತು. ಈ ನಿರ್ಣಾಯಕ ಪಂದ್ಯದಲ್ಲಿ, ಕೆರಿಬಿಯನ್ ಪಡೆ 107 ರನ್‌ಗಳ ಭಾರಿ ಅಂತರದಿಂದ ಗೆಲುವು ಸಾಧಿಸಿ, ಗ್ರೂಪ್-1 ರ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ತಲುಪಿತು. ವಿಂಡೀಸ್ ಏನೋ ಗೆಲುವು ದಾಖಲಿಸಿತು. ಆದರೆ, ಇಲ್ಲಿ ನಿಜವಾಗಿ ಸಂಕಷ್ಟಕ್ಕೆ ಸಿಲುಕಿರುವುದು ಮಾತ್ರ ಭಾರತ. ಹೌದು, ಟೀಮ್ ಇಂಡಿಯಾದ ಸಮೀಸ್ ಹಾದಿ ಮತ್ತಷ್ಟು ದುರ್ಗಮವಾಗಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ತಲುಪುವುದು ತುಂಬಾ ಕಷ್ಟ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಟೀಮ್ ಇಂಡಿಯಾ ತನ್ನ ಮುಂದಿನ ಎರಡೂ ಪಂದ್ಯಗಳನ್ನು ಭಾರಿ ರನ್ ರೇಟ್ನೊಂದಿಗೆ ಗೆದ್ದರೆ, ಸೆಮಿಫೈನಲ್ ರೇಸ್ನಲ್ಲಿ ಜೀವವಾಗಿ ಉಳಿಯುವ ಸಾಧ್ಯತೆಗಳಿವೆ.