ಬರೆದು ಜೇಬಿನಲ್ಲಿ ಇಟ್ಟುಕೊಂಡಿದ್ದ ಚೀಟಿಯಲ್ಲಿ, ಗುರುಗಳ ಕೃಪೆಯಿಂದ, 15 ವರ್ಷಗಳ ದೀರ್ಘ ಮತ್ತು ನೋವಿನ ಕಾಯುವಿಕೆ ಇಂದು ಕೊನೆಗೊಂಡಿದೆ. ನನಗೆ ಈ ಅವಕಾಶ ನೀಡಿದ್ದಕ್ಕಾಗಿ ನಾನು ಮುಂಬೈ ಇಂಡಿಯನ್ಸ್ ತಂಡಕ್ಕೆ ಸದಾ ಋಣಿ. ಜೈ ಶ್ರೀ ರಾಮ್ ಎಂದು ಬರೆಯಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ರಘು, ಯಾವುದೇ ವಿಕೆಟ್ ಪಡೆಯಲಿಲ್ಲ. ಬದಲಿಗೆ ನಾಲ್ಕು ಓವರ್‌ಗಳಲ್ಲಿ 24 ರನ್‌ಗಳನ್ನು ನೀಡಿದರು. ಅದೇ, ಲಖನೌ ಸೂಪರ್ ಜೈಂಟ್ಸ್ ಎದುರು 4 ಓವರ್‌ಗಳಲ್ಲಿ ಒಂದು ವಿಕೆಟ್ ಪಡೆದು 36 ರನ್‌ಗಳನ್ನು ನೀಡುವ ಮೂಲಕ ತಮ್ಮ ಬಹುದಿನಗಳ ಆಸೆಯನ್ನು ಕಡೆಗೂ ಈಡೇರಿಸಿಕೊಂಡಿದ್ದಾರೆ,(ಏಜೆನ್ಸೀಸ್).