ಆರ್​ಸಿಬಿಯಿಂದಲೇ ಮೊದಲ ಪಂದ್ಯ ಆರಂಭ... ಜ.9ರಿಂದ ಮಹಿಳಾ ಐಪಿಎಲ್​ ಶುರು, ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ

ಡಬ್ಲ್ಯೂಪಿಎಲ್​ ವೇಳಾಪಟ್ಟಿ ಪ್ರಕಟ
ಡಬ್ಲ್ಯೂಪಿಎಲ್​ ವೇಳಾಪಟ್ಟಿ ಪ್ರಕಟ
Published on

ಪ್ರಮುಖ ಮುಖ್ಯಾಂಶಗಳು

  • ಹರಾಜು ಪ್ರಕ್ರಿಯೆ ಬೆನ್ನಲ್ಲೇ ವೇಳಾಪಟ್ಟಿ ಪ್ರಕಟ
  • ಜ.09ರಿಂದ ಡಬ್ಲ್ಯೂಪಿಎಲ್​ ಪಂದ್ಯಗಳು ಆರಂಭ
  • ಮೊದಲ ಪಂದ್ಯ ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್​ ನಡುವೆ
ಮುಂಬೈ: ಮಹಿಳಾ ಐಪಿಎಲ್ ಎಂದೇ ಖ್ಯಾತವಾಗಿರುವ ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಮೆಗಾ ಹರಾಜು ಪ್ರಕ್ರಿಯೆ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದ್ದು, ಇದರಲ್ಲಿ ಭಾರತ ತಂಡದ ಆಲ್ರೌಂಡರ್ ದೀಪ್ತಿ ಶರ್ಮ ದುಬಾರಿ ಆಟಗಾರ್ತಿಯಾಗಿ ಹೊರಹೊಮ್ಮಿದರು. ಗುರುವಾರ ನಡೆದ ಹರಾಜಿನಲ್ಲಿ 3.20 ಕೋಟಿ ರೂ. ವ್ಯಯಿಸಿದ ಯುಪಿ ವಾರಿಯರ್ಸ್‌ ಫ್ರಾಂಚೈಸಿ, ರೈಟ್ ಟು ಮ್ಯಾಚ್ (ಆರ್‌ಟಿಎಂ) ಕಾರ್ಡ್ ಮೂಲಕ ದೀಪ್ತಿ ಅವರನ್ನು ತಂಡಕ್ಕೆ ಕರೆತಂದಿತು.   
ಹರಾಜು ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಸಂಪೂರ್ಣ ವೇಳಾಪಟ್ಟಿ ಇದೀಗ ಹೊರಬಿದ್ದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶನಿವಾರ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವ ಮೂಲಕ ಕ್ರಿಕೆಟ್​ ಪ್ರಿಯರ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿದೆ.
ಡಬ್ಲ್ಯೂಪಿಎಲ್​ ಆವೃತ್ತಿಯ ಪಂದ್ಯಗಳು ಜನವರಿ 9ರಿಂದ ಫೆಬ್ರವರಿ 5 ರವರೆಗೆ ನಡೆಯಲಿವೆ. ಮೊದಲ ಪಂದ್ಯವು ಜನವರಿ 9ರಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಭಾರಂಭ ಪಂದ್ಯವನ್ನಾಡಲಿದೆ. ಮುಂಬೈನಲ್ಲಿ ಲೀಗ್​ನ ಎಲ್ಲ ಪಂದ್ಯಗಳು ನಡೆಯಲಿದ್ದು, ಫೈನಲ್​ ವಡೋದರಾದಲ್ಲಿ ನಡೆಯಲಿದೆ.
WPL 2026ರ ವೇಳಾಪಟ್ಟಿ (ನವಿ ಮುಂಬೈ)
ಜ.9: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
ಜ.10: ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್
ಜ.10: ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್
ಜ.11: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್
ಜ.12: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್
ಜ.13: ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್
ಜ.14: ಯುಪಿ ವಾರಿಯರ್ಸ್ vs ದೆಹಲಿ ಕ್ಯಾಪಿಟಲ್ಸ್
ಜ.15: ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್
ಜ.16: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್
ಜ.17: ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್
ಜ.17: ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
ಜ.19: ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
ಜ.20: ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್
ಜ.22: ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್
ಜ.24: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್
ಜ.26: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್
ಜ.27: ಗುಜರಾತ್ ಜೈಂಟ್ಸ್ vs ದೆಹಲಿ ಕ್ಯಾಪಿಟಲ್ಸ್
ಜ.29: ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು
ಜ.30: ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್
ಫೆ.1: ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್
ಫೆ.3: ಎಲಿಮಿನೇಟರ್
ಫೆ.5: ಫೈನಲ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net