ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು: WTC ಅಂಕಪಟ್ಟಿಯಲ್ಲಿ ಕುಸಿದ ಭಾರತ, ಮೇಲೇರಿದ ಪಾಕ್​! WTC Points Table

ಭಾರತ ತಂಡ
ಭಾರತ ತಂಡ
Published on

ಪ್ರಮುಖ ಮುಖ್ಯಾಂಶಗಳು

  • ಟೀಮ್​ ಇಂಡಿಯಾಗೆ ತನ್ನ ತವರು ನೆಲದಲ್ಲಿ ಮತ್ತೊಂದು ಹೀನಾಯ ಸೋಲು
  • ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಕೈಚೆಲ್ಲಿದ ಭಾರತ
  • ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025-27 ಪಾಯಿಂಟ್ಸ್ ಟೇಬಲ್‌ನಲ್ಲಿ ಕುಸಿದ ಭಾರತ
ನವದೆಹಲಿ: ಟೀಮ್​ ಇಂಡಿಯಾ ತನ್ನ ತವರು ನೆಲದಲ್ಲಿ ಮತ್ತೊಂದು ಹೀನಾಯ ಸೋಲನ್ನು ಅನುಭವಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ಕೈಚೆಲ್ಲಿದೆ. ಗುವಾಹಟಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ದಕ್ಷಿಣ ಆಫ್ರಿಕಾ 408 ರನ್‌ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿತು. ಈ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್‌ ಮಾಡುವುದರೊಂದಿಗೆ ದಕ್ಷಿಣ ಆಫ್ರಿಕಾ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27 ಪಾಯಿಂಟ್ಸ್ ಟೇಬಲ್‌ನಲ್ಲಿ ( WTC Points Table ) ತನ್ನ ಎರಡನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.
ದಕ್ಷಿಣ ಆಫ್ರಿಕಾ ತಂಡವು WTC-2027 ಆವೃತ್ತಿಯಲ್ಲಿ ಇಲ್ಲಿಯವರೆಗೆ ನಾಲ್ಕು ಟೆಸ್ಟ್‌ಗಳನ್ನು ಆಡಿದೆ. ಅದರಲ್ಲಿ ಭಾರತ ವಿರುದ್ಧದ ಸರಣಿಯೂ ಸೇರಿದೆ. ಇದರಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಕಂಡಿದ್ದು, ಒಂದರಲ್ಲಿ ಸೋಲುಂಡಿದ್ದಾರೆ. ತಂಡವು ಪ್ರಸ್ತುತ 36 ಅಂಕಗಳನ್ನು ಮತ್ತು ಶೇ. 75 ರಷ್ಟು ಗೆಲುವಿನ ಪ್ರಮಾಣವನ್ನು ಹೊಂದಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಟೀಮ್​ ಇಂಡಿಯಾ WTC ನಲ್ಲಿ ಐದನೇ ಸ್ಥಾನಕ್ಕೆ ಕುಸಿದಿದೆ. ಭಾರತ ಇದುವರೆಗೆ 9 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿದ್ದು, ನಾಲ್ಕು ಪಂದ್ಯಗಳಲ್ಲಿ ಸೋಲುಂಡಿದೆ ಮತ್ತು ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಟೀಮ್ ಇಂಡಿಯಾ 52 ಅಂಕಗಳನ್ನು ಹೊಂದಿದ್ದು, ಶೇ. 48.15 ರಷ್ಟು ಗೆಲುವಿನ ಪ್ರಮಾಣವನ್ನು ಹೊಂದಿದೆ.
ನಾಲ್ಕು ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ತಂಡ ಶೇ. 100% ರಷ್ಟು ಗೆಲುವಿನ ಪ್ರಮಾಣದೊಂದಿಗೆ WTC-2027 ಆವೃತ್ತಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಡಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆದ್ದು, ಇನ್ನೊಂದು ಪಂದ್ಯವನ್ನು ಡ್ರಾ ಮಾಡಿಕೊಂಡಿರುವ ಶ್ರೀಲಂಕಾ, ಶೇ. 66.670 ರಷ್ಟು ಗೆಲುವಿನ ಪ್ರಮಾಣದೊಂದಿಗೆ ಮೂರನೇ ಸ್ಥಾನದಲ್ಲಿದೆ. ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನ ಎರಡು ಪಂದ್ಯಗಳನ್ನು ಆಡಿದ್ದು, ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ, ಇನ್ನೊಂದು ಪಂದ್ಯವನ್ನು ಸೋತಿದೆ. ಶೇ. 50 ರಷ್ಟು ಗೆಲುವಿನ ಪ್ರಮಾಣವನ್ನು ಹೊಂದಿದೆ.
ಉಳಿದಂತೆ ಇಂಗ್ಲೆಂಡ್, ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ಕ್ರಮವಾಗಿ ಆರು, ಏಳು ಮತ್ತು ಎಂಟನೇ ಸ್ಥಾನದಲ್ಲಿವೆ. ನ್ಯೂಜಿಲೆಂಡ್ ತಂಡ ಈ ಆವೃತ್ತಿಯಲ್ಲಿ ಇಲ್ಲಿಯವರೆಗೆ ಒಂದೇ ಒಂದು ಪಂದ್ಯವನ್ನು ಆಡಿಲ್ಲ, (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net