ಮಾಲ್ಡೀವ್ಸ್‌ ಟ್ರಿಪ್ ಮುಗಿಸಿ ಬಂದ ಕೊಹ್ಲಿಗೆ ಕರೊನಾ ಪಾಸಿಟಿವ್

dthhgfh
Published on

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್​ ಕೊಹ್ಲಿಗೆ ಕರೊನಾ ಸೋಂಕು ತಗುಲಿದೆ. ಮಾಲ್ಡೀವ್ಸ್‌ನಲ್ಲಿ ಹಾಲಿ ಡೇ ಮುಗಿಸಿ ಹಿಂದಿರುಗಿದ ನಂತರ ಕೋವಿಡ್ ಸೋಂಕು ತಗುಲಿರುವುದು ಧೃಡಪಟ್ಟಿದೆ.​

ಭಾರತದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರಿಗೆ ಮಾಲ್ಡೀವ್ಸ್‌ನಿಂದ ಭಾರತಕ್ಕೆ ಆಗಮಿಸಿದ ನಂತರ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಮಾಲ್ಡೀವ್ಸ್‌ನಿಂದ ಭಾರತಕ್ಕೆ ವಾಪಸ್ ಬಂದ ತಕ್ಷಣ ವಿರಾಟ್ ಕೊಹ್ಲಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ನಡೆಸಿದ್ದಾರೆ. ಸೋಂಕಿನಿಂದ ಕೊಹ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಇಂಗ್ಲೆಂಡ್ ಪ್ರವಾಸ ಆರಂಭಕ್ಕೂ ಮುನ್ನವೇ ಭಾರತ ತಂಡ ಸಮಸ್ಯೆಗಳ ಸುಳಿಯಲ್ಲಿ ಸಿಕ್ಕು ಹೊದ್ದಾಡುತ್ತಿದೆ. ಅಶ್ವಿನ್ ಸೇರಿದಂತೆ ಕೆಲವು ಆಟಗಾರರಿಗೆ ಕೋವಿಡ್ -19 ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಬಂದಿವೆ ಎಂದು ಹೇಳಲಾಗುತ್ತಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಅವರು ಆಟಗಾರರಿಗೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ ಏಕೆಂದರೆ ಮಂಡಳಿಯು ಕಳೆದ ಬಾರಿ ನಡೆದಂತಹ ಸಂಕಷ್ಟ ಎದುರಿಸಲು ತಯಾರಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net