ರಾಯಲ್ಸ್‌ಗೆ ಶರಣಾದ ಸಿಎಸ್‌ಕೆ, ಟೂರ್ನಿಯಿಂದ ಹೊರಬೀಳುವ ಸನಿಹದಲ್ಲಿ ಧೋನಿ ಬಳಗ

RAJASTHAN ROYALS AND CSK FOR WEB
Published on

ಅಬುಧಾಬಿ: ಜೋಸ್ ಬಟ್ಲರ್ (70*ರನ್, 48 ಎಸೆತ, 7 ಬೌಂಡರಿ, 2 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಮಾರಕ ದಾಳಿಗೆ ಬೆದರಿದ ಮೂರು ಬಾರಿಯ ಚಾಂಪಿಯನ್ ಚೆನ್ನೈಸೂಪರ್ ಕಿಂಗ್ಸ್ ತಂಡ ಐಪಿಎಲ್-13ರ ತನ್ನ 10ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು 7 ವಿಕೆಟ್‌ಗಳಿಂದ ಶರಣಾಯಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಕೊನೇ ಸ್ಥಾನಕ್ಕೆ ಕುಸಿದ ಧೋನಿ ಬಳಗಕ್ಕೆ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ಲೇಆಫ್ ಹಂತಕ್ಕೇರುವುದರಿಂದ ವಂಚಿತವಾಗುವ ಸಾಧ್ಯತೆ ಹೆಚ್ಚಾಗಿದೆ. ಮತ್ತೊಂದೆಡೆ, ಹ್ಯಾಟ್ರಿಕ್ ಸೋಲಿನ ಭೀತಿಯಿಂದ ಪಾರಾದ ರಾಜಸ್ಥಾನ ತಂಡ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿಯುವ ಮೂಲಕ ಲೀಗ್‌ನಲ್ಲಿ ತನ್ನ ಆಸೆ ವೃದ್ಧಿಸಿಕೊಂಡಿತು.

ಶೇಖ್ ಜಯೆದ್ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ತಂಡ 5 ವಿಕೆಟ್‌ಗೆ 125 ರನ್‌ಗಳಿಸಿತು. ಹಾಲಿ ಟೂರ್ನಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೊಂದು ಗಳಿಸಿದ ಕನಿಷ್ಠ ಮೊತ್ತವಾಗಿದೆ. ಪ್ರತಿಯಾಗಿ ರಾಜಸ್ಥಾನ ರಾಯಲ್ಸ್ ತಂಡ 17.3 ಓವರ್‌ಗಳಲ್ಲಿ 3 ವಿಕೆಟ್‌ಗೆ 126 ರನ್‌ಗಳಿಸಿ ಜಯ ದಾಖಲಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net