ಟಿ20 ವಿಶ್ವಕಪ್​ನಿಂದ ನಿರ್ಗಮಿಸಿದ ಬೆನ್ನಲ್ಲೇ ಅಂತರಾಷ್ಟ್ರೀಯ ಕ್ರಿಕೆಟ್​ಗೆ​ ವಿದಾಯ ಘೋಷಿಸಿದ ಆಸೀಸ್​ ಸ್ಟಾರ್​ ಆಟಗಾರ

Australia
Published on

ನವದೆಹಲಿ: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಆಸ್ಟ್ರೇಲಿಯಾ​ ತಂಡದ ಸ್ಪೋಟಕ ಬ್ಯಾಟ್ಸ್​ಮನ್​ ಡೇವಿಡ್​ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಜೂನ್​ 25ರಂದು ಭಾರತದ ವಿರುದ್ಧ ನಡೆದ ಸೂಪರ್ 08 ಹಣಾಹಣಿಯಲ್ಲಿ ಆಸ್ಟ್ರೇಲಿಯಾ 24 ರನ್​ಗಳ ಸೋಲನ್ನು ಅನುಭವಿಸಿತ್ತು. ಈ ಸೋಲಿನೊಂದಿಗೆ ಡೇವಿಡ್​ ವಾರ್ನರ್​ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

09ನೇ ಆವೃತ್ತಿಯ ಟಿ20 ವಿಶ್ವಕಪ್​ ಆರಂಭವಾಗುವುದಕ್ಕೂ ಮುನ್ನ ಡೇವಿಡ್​ ವಾರ್ನರ್​ ನಿವೃತ್ತಿಯ ಬಗ್ಗೆ ಮಾತನಾಡಿದ್ದರು. ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದರು. ಆದರೆ ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯಾ ತಂಡದ ಲೆಕ್ಕಾಚಾರಗಳು ತಲೆಕೆಳಗಾಗಿದೆ. ಹೀಗಾಗಿ ಡೇವಿಡ್ ವಾರ್ನರ್ ನೋವಿನ ವಿದಾಯ ಹೇಳಿದ್ದಾರೆ.

2024ರ ಜನವರಿ 01ರಂದು ಡೇವಿಡ್​ ವಾರ್ನರ್​ ಏಕದಿನ ಮಾದರಿ, ಜನರಿ 06ರಂದು ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದರು. ಇದೀಗ ಚುಟುಕು ಕ್ರಿಕೆಟ್​ ಮಾದರಿಗೆ ಡೇವಿಡ್​ ವಾರ್ನರ್​ ವಿದಾಯ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ ಒಂದು ಶತಕ, 28 ಅರ್ಧಶತಕ ಒಳಗೊಂಡಂತೆ 3277 ರನ್​ ಸಿಡಿಸಿದ್ದಾರೆ.ಏಕದಿನ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ಪರ 161 ಪಂದ್ಯಗಳನ್ನು ಆಡಿರುವ ವಾರ್ನರ್​ 33 ಅರ್ಧಶತಕ, 22 ಶತಕ ಒಳಗೊಂಡಂತೆ 6932 ರನ್ ಕಲೆಹಾಕಿದ್ದಾರೆ. ಟೆಸ್ಟ್​ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ಪರ 112 ಪಂದ್ಯಗಳನ್ನು ಆಡಿರುವ ವಾರ್ನರ್​ 26 ಶತಕ, 37 ಅರ್ಧಶತಕ ಒಳಗೊಂಡಂತೆ  8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ಪರ 3 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಆಗಿ ಡೇವಿಡ್ ವಾರ್ನರ್ ಹೊರಹೊಮ್ಮಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net