ಶಿಖರ್ ಧವನ್ ಶತಕದಾಟ, ಡೆಲ್ಲಿ ಕ್ಯಾಪಿಟಲ್ಸ್‌ಗೆ ಒಲಿದ ಜಯ

shikar dhawan for web
Published on

ಶಾರ್ಜಾ: ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ (101*ರನ್, 58 ಎಸೆತ, 14 ಬೌಂಡರಿ, 1 ಸಿಕ್ಸರ್) ಅಜೇಯ ಶತಕದಾಟ ಹಾಗೂ ಕಡೇ ಓವರ್‌ನಲ್ಲಿ ಅಕ್ಷರ್ ಪಟೇಲ್ (21*ರನ್, 5 ಎಸೆತ, 3 ಸಿಕ್ಸರ್) ತೋರಿದ ಸ್ಫೋಟಕ ಬ್ಯಾಟಿಂಗ್ ಫಲವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್-13ರ ತನ್ನ 9ನೇ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿತು. ಶಾರ್ಜಾ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಡೆಲ್ಲಿ ತಂಡ 5 ವಿಕೆಟ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತು. ಇದರೊಂದಿಗೆ 7ನೇ ಗೆಲುವು ದಾಖಲಿಸಿದ ಡೆಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, 6ನೇ ಸೋಲು ಕಂಡ ಧೋನಿ ಬಳಗದ ಭವಿಷ್ಯ ಮತ್ತಷ್ಟು ಕಮರಿತು.

ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಚೆನ್ನೈ ತಂಡ, ಆರಂಭಿಕ ಆಘಾತದ ನಡುವೆಯೂ ಫಾಫ್ ಡು ಪ್ಲೆಸಿಸ್ (58 ರನ್, 47 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ಅಂಬಟಿ ರಾಯುಡು (45*ರನ್, 25 ಎಸೆತ, 1 ಬೌಂಡರಿ, 4 ಸಿಕ್ಸರ್) ಕಟ್ಟಿದ ಜವಾಬ್ದಾರಿಯುತ ಇನಿಂಗ್ಸ್ ಲವಾಗಿ 4 ವಿಕೆಟ್‌ಗೆ 179 ರನ್ ಗಳಿಸಿತು. ಪ್ರತಿಯಾಗಿ ಡೆಲ್ಲಿ ತಂಡ 19.5 ಓವರ್‌ಗಳಲ್ಲಿ 5 ವಿಕೆಟ್‌ಗೆ 185 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net