

ಅಬುಧಾಬಿ: ಅನುಭವಿ ಎಡಗೈ ಆರಂಭಿಕ ಶಿಖರ್ ಧವನ್ (78 ರನ್, 50 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ವೇಗಿಗಳಾದ ಕಗಿಸೊ ರಬಾಡ (29ಕ್ಕೆ 4), ಮಾರ್ಕಸ್ ಸ್ಟೋಯಿನಿಸ್ (26ಕ್ಕೆ 3) ಮಾರಕ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್-13ರಲ್ಲಿ ಎರಡನೇ ತಂಡವಾಗಿ ಫೈನಲ್ ಪ್ರವೇಶಿಸಿತು. ಶೇಖ್ ಜಯೇದ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ 2016ರ ಚಾಂಪಿಯನ್ ಸನ್‌ರೈಸರ್ಸ್ ತಂಡವನ್ನು 17 ರನ್‌ಗಳಿಂದ ಮಣಿಸುವ ಮೂಲಕ ಡೆಲ್ಲಿ ತಂಡ ಐಪಿಎಲ್ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿತು.