ಧೋನಿ ಮತ್ತು ಕೊಹ್ಲಿ ಮಕ್ಕಳ ವಿರುದ್ಧ ಕೀಳು ಮಟ್ಟದ ಕಮೆಂಟ್ ಮಾಡಿದವರಿಗೆ ಬಂಧನದ ಭೀತಿ!

dhoni and kohli
Published on

ನವದೆಹಲಿ: ಟೀಂ ಇಂಡಿಯಾದ ಮಾಜಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಹಾಗೂ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಮಕ್ಕಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೀಳು ಮಟ್ಟದಲ್ಲಿ ಕಮೆಂಟ್ ಮಾಡಿದ್ದಾರೆಂದು ಆರು ಜನರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಇಬ್ಬರು ಕ್ರಿಕೆಟಿಗರ ಪುತ್ರಿಯರ ವಿರುದ್ಧ ಆಕ್ಷೇಪಾರ್ಹ ಕಮೆಂಟ್ ಮಾಡಿದ್ದಕ್ಕಾಗಿ ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸಿದ್ದರು. ಅದರಂತೆ ಸ್ವಾಮಿ ಮಲಿವಾಲ್ ನೀಡಿದ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರು ಆರು ಜನರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಟ್ವಿಟರ್​​ನಲ್ಲಿ ಸ್ವಾತಿ ಮಲಿವಾಲ್ ಎಫ್​ಐಆರ್ ಪ್ರತಿಯನ್ನು ಹಂಚಿಕೊಂಡಿದ್ದು, ನನ್ನ ಸೂಚನೆಯ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಧ್ಯದಲ್ಲೇ ತಪ್ಪಿತಸ್ಥರನ್ನು ಪತ್ತೆ ಮಾಡಿ ಬಂಧಿಸಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net