ಡೆಲ್ಲಿ ಗೆಲುವಿನ ಓಟಕ್ಕೆ ಬ್ರೇಕ್‌; ರೋಚಕ ಪಂದ್ಯದಲ್ಲಿ ಗೆಲುವು ಸಾಧಿಸಿದ ಮುಂಬೈ|Ipl

delhi
Published on

Ipl| 2025ರ ಐಪಿಎಲ್‌ನಲ್ಲಿ ಮಿಂಚಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್‌ ಬ್ರೇಕ್‌ ಹಾಕಿದೆ. ಇಂದು ನಡೆದ ರೋಚಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಪಾಂಡ್ಯ ಪಡೆ ಗೆದ್ದು ಬೀಗಿದೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಗಳಿಸಿತು. ಮುಂಬೈ ಇಂಡಿಯನ್ಸ್ ನೀಡಿದ್ದ 206ರನ್​ಗಳ ಸವಾಲಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಹಿಂದಿನ ಪಂದ್ಯಗಳಂತೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರು.

206 ರನ್‌ಗಳ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಎಸೆತದಲ್ಲೇ ಆರಂಭಿಕ ಬ್ಯಾಟರ್ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಅವರ ವಿಕೆಟ್ ಕಳೆದುಕೊಂಡಿತು. ಆದರೆ ಕರುಣ್ ನಾಯರ್ ಮತ್ತು ಅಭಿಷೇಕ್ ಪೊರೆಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸರೆಯಾದರು.

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಎಸೆದ 19 ನೇ ಓವರ್‌ನಲ್ಲಿ ಮೂರು ರನ್ ಔಟ್‌ಗಳಿಂದ ಮುಂಬೈ ಇಂಡಿಯನ್ಸ್ ತಂಡ,  ಡೆಲ್ಲಿ ಕ್ಯಾಪಿಟಲ್ಸ್ ಅನ್ನು 12 ರನ್‌ಗಳಿಂದ ಸೋಲಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net