

ಓಮನ್: ಓಮನ್ ಆತಿಥ್ಯದಲ್ಲಿ ನಡೆಯುತ್ತಿರುವ ಎಮರ್ಜಿಂಗ್ ಏಷ್ಯಾಕಪ್ನಲ್ಲಿ (Emerging AsiaCup) ಭಾರತ ಎ (India A) ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು, ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ಆತಿಥೇಯ ಓಮನ್ ವಿರುದ್ಧ ನಡೆದ ಪಂದ್ಯದಲ್ಲಿ 6 ವಿಕೆಟ್ಗಳ ಜಯ ಸಾಧಿಸುವ ಮೂಲಕ ಭಾರತ ಸೆಮಿಫೈನಲ್ ಪ್ರವೇಶಿಸಿದೆ.
ಎಮರ್ಜಿಂಗ್ ಏಷ್ಯಾಕಪ್ನಲ್ಲಿ (Emerging AsiaCup) ನಡೆದ ಲೀಗ್ ಹಂತದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಓಮನ್ (Oman) ತಂಡವು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿತ್ತು. ಆತಿಥೇಯರು ನೀಡಿದ ಗುರಿಯನ್ನು ಬೆನ್ನತ್ತಿದ್ದ ಭಾರತ ಎ (India A) ತಂಡವು ಆಯುಷ್ ಬದೋನಿ (51 ರನ್, 27 ಎಸೆತ, 6 ಬೌಂಡರಿ, 2 ಸಿಕ್ಸರ್) ಅರ್ಧಶತಕದ ಫಲವಾಗಿ ಗುರಿಯನ್ನು 15.2 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ ತಲುಪುವ ಮೂಲಕ ಗೆಲುವಿನ ನಗೆ ಬೀರಿತು.
ಸೆಮಿಫೈನಲ್‌ನಲ್ಲಿ ಭಾರತದ ಎದುರಾಳಿ ಯಾರು?
ಲೀಗ್ ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಎ ತಂಡವನ್ನು ಮಣಿಸಿದ್ದ ಭಾರತ ಆ ನಂತರದ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅನ್ನು ಸೋಲಿಸಿತ್ತು. ಈ ಮೂಲಕ ಭಾರತ 3 ಪಂದ್ಯಗಳಲ್ಲಿ 6 ಅಂಕಗಳೊಂದಿಗೆ ಎ ಗುಂಪಿನಲ್ಲಿ ಮೊದಲ ಸ್ಥಾನದಲ್ಲಿದೆ. ಇದರಿಂದಾಗಿ ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ಅಫ್ಘಾನಿಸ್ತಾನ ಎ ತಂಡವನ್ನು ಸೆಮಿಫೈನಲ್‌ನಲ್ಲಿ ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 25 ರಂದು ನಡೆಯಲಿದೆ. ಮೊದಲ ಸೆಮಿಫೈನಲ್‌ನಲ್ಲಿ ಎ ಗುಂಪಿನ ವಿಜೇತ ಶ್ರೀಲಂಕಾ ಎ ಮತ್ತು ಬಿ ಗುಂಪಿನ ನಂಬರ್ 2 ತಂಡ ಪಾಕಿಸ್ತಾನ ಎ ನಡುವೆ ಹಣಾಹಣಿ ನಡೆಯಲಿದೆ. ಈ ಪಂದ್ಯ ಕೂಡ ಅಕ್ಟೋಬರ್ 25 ರಂದೇ ನಡೆಯಲಿದೆ.