

ಸೌಥಾಂಪ್ಟನ್: ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ 2ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ದಿ ರೋಸ್‌ಬೌಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಾಕಿಸ್ತಾನ ತಂಡ ಶುಕ್ರವಾರದ ಅಂತ್ಯಕ್ಕೆ 9 ವಿಕೆಟ್‌ಗೆ 223 ರನ್ ಪೇರಿಸಿದೆ. ಶನಿವಾರದ ಆಟ ಮಳೆಗೆ ಆಹುತಿಯಾಯಿತು. ಮೊಹಮದ್ ರಿಜ್ವಾನ್ (60ರನ್) ಹಾಗೂ ನಸೀಮ್ ಷಾ (1) ಕ್ರೀಸ್‌ನಲ್ಲಿದ್ದಾರೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ತಂಡ 1-0 ಯಿಂದ ಮುನ್ನಡೆ ಸಾಧಿಸಿದೆ.
ಪಾಕಿಸ್ತಾನ ಮೊದಲ ಇನಿಂಗ್ಸ್: 2ನೇ ದಿನದಾಟ ಅಂತ್ಯಕ್ಕೆ 9 ವಿಕೆಟ್‌ಗೆ 223 (ರಿಜ್ವಾನ್ 60*, ಆಂಡರ್‌ಸನ್ 48ಕ್ಕೆ 3, ಬ್ರಾಡ್ 56ಕ್ಕೆ 3).