ಮೊದಲ ಬಾರಿಗೆ ಪಾಕಿಸ್ತಾನ ಪ್ರವಾಸ ಕೈಗೊಳ್ಳಲು ಸಜ್ಜಾಗಿದೆ ಈ ಮಹಿಳಾ ಕ್ರಿಕೆಟ್ ತಂಡ..!

england and pak match forweb
Published on

ಲಂಡನ್: ಕರೊನಾ ವೈರಸ್ ಭೀತಿಯಿಂದಾಗಿ ಬಹುತೇಕ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇದೀಗ ಹಂತ ಹಂತವಾಗಿ ಕ್ರೀಡೆಗಳು ಪುನರಾರಂಭಗೊಳ್ಳುತ್ತಿವೆ. ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳು ನಡೆಯುತ್ತಿವೆ. ಭದ್ರತೆ ದೃಷ್ಟಿಯಿಂದ ಪಾಕಿಸ್ತಾನ ಪ್ರವಾಸ ಕೈಗೊಳ್ಳಲು ಕೆಲ ತಂಡಗಳು ಇಂದಿಗೂ ಹಿಂದೇಟು ಹಾಕುತ್ತಿವೆ. ಇದೀಗ ಪಾಕಿಸ್ತಾನ ಪ್ರವಾಸಕ್ಕೆ ಇಂಗ್ಲೆಂಡ್ ಮಹಿಳಾ ತಂಡ ಸಜ್ಜಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಇಂಗ್ಲೆಂಡ್ ಮಹಿಳಾ ತಂಡ ಪ್ರವಾಸ ಕೈಗೊಳ್ಳುತ್ತಿದೆ.

2021ರ ಅಕ್ಟೋಬರ್ ತಿಂಗಳಲ್ಲಿ ಇಂಗ್ಲೆಂಡ್ ಪುರುಷರ ತಂಡ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದು ನಿಗದಿಯಾಗಿದೆ. ಇದರ ಬೆನ್ನಲ್ಲೇ ಇಂಗ್ಲೆಂಡ್ ಮಹಿಳಾ ತಂಡ ಕೂಡ ಪಾಕ್‌ಗೆ ಪ್ರಯಾಣಿಸಲಿದೆ. ಅಕ್ಟೋಬರ್ 14 ಮತ್ತು 15 ರಂದು ಕರಾಚಿಯಲ್ಲಿ ಎರಡು ಟಿ20 ಪಂದ್ಯಗಳನ್ನಾಡಲಿದೆ. ಬಳಿಕ ಕರಾಚಿಯಲ್ಲೇ ಅಕ್ಟೋಬರ್ 18, 20 ಹಾಗೂ 22 ರಂದು ಮೂರು ಏಕದಿನ ಪಂದ್ಯಗಳನ್ನಾಡಲಿದೆ. ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳು ಆಸ್ಟ್ರೇಲಿಯಾದಲ್ಲಿ ಕಳೆದ ವರ್ಷ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಡೆಯ ಬಾರಿಗೆ ಎದುರಾಗಿದ್ದವು. ಇಂಗ್ಲೆಂಡ್ ತಂಡ 42 ರನ್‌ಗಳಿಂದ ಜಯ ದಾಖಲಿಸಿತ್ತು.

ಪಾಕಿಸ್ತಾನ-ಇಂಗ್ಲೆಂಡ್ ಮಹಿಳಾ ಸರಣಿಯೂ ಇತರ ತಂಡಗಳಿಗೆ ಮಾದರಿಯಾಗಲಿದೆ. ಇತರ ತಂಡಗಳು ಪಾಕ್ ಪ್ರವಾಸ ಕೈಗೊಳ್ಳಲು ಉತ್ತೇಜನ ನೀಡಿದಂತಾಗುತ್ತದೆ ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸೀಮ್ ಖಾನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net