ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತಕ್ಕೆ ನೇಪಾಳ ಸವಾಲು

New-Project-54
Published on

ಹಾಂಗ್‌ರೆೌ: ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ನ ಪುರುಷರ ಕ್ರಿಕೆಟ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಭಾರತ ತಂಡ ಮಂಗಳವಾರ ಕ್ವಾರ್ಟರ್‌ಫೈನಲ್‌ನಲ್ಲಿ ನೇಪಾಳ ತಂಡವನ್ನು ಎದುರಿಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ಪ್ರಮುಖ ಆಟಗಾರರು ಏಕದಿನ ವಿಶ್ವಕಪ್‌ನಲ್ಲಿ ಆಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಸೇರಿ ಪಾಕಿಸ್ತಾನ, ಬಾಂಗ್ಲಾದೇಶ, ಅ್ಘಾನಿಸ್ತಾನ ತಂಡಗಳು 2ನೇ ಸ್ತರದ ಆಟಗಾರರನ್ನು ಕೂಟದಲ್ಲಿ ಕಣಕ್ಕಿಳಿಸಿವೆ. ಐಪಿಎಲ್‌ನಲ್ಲಿ ಭರವಸೆ ಮೂಡಿಸಿರುವ ಆಟಗಾರರು ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡದ ಪರ ಆಡಲಿದ್ದಾರೆ. ಮಹಿಳೆಯರ ವಿಭಾಗದಲ್ಲಿ ಚಿನ್ನ ಜಯಿಸಿರುವ ಭಾರತ, ಪುರುಷರ ವಿಭಾಗದಲ್ಲೂ ಅದನ್ನು ಪುನರಾವರ್ತಿಸುವ ನಿರೀಕ್ಷೆಯಲ್ಲಿದೆ.

ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ಸಿಕ್ಸರ್ ಕಿಂಗ್ ರಿಂಕು ಸಿಂಗ್, ಶಿವಂ ದುಬೆ, ರಾಹುಲ್ ತ್ರಿಪಾಠಿ ಒಳಗೊಂಡ ಬಲಿಷ್ಠ ಬ್ಯಾಟಿಂಗ್ ಕ್ರಮಾಂಕ ಹೊಂದಿರುವ ಭಾರತದ ಯುವ ಪಡೆಗೆ ಬೌಲಿಂಗ್‌ನಲ್ಲಿ ಅರ್ಷದೀಪ್ ಸಿಂಗ್, ರವಿ ಬಿಷ್ಣೋಯಿ, ಮುಕೇಶ್ ಕುಮಾರ್ ಬಲವಿದೆ. ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶನ ತಂಡಕ್ಕಿದೆ.

ಆರಂಭ: ಬೆಳಗ್ಗೆ 6.30

ನೇರಪ್ರಸಾರ: ಸೋನಿ ಸ್ಪೋರ್ಟ್ಸ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net