

Delhi Capitals: ಇಂಡಿಯನ್ ಪ್ರೀಮಿಯರ್ ಲೀಗ್(IPL) 2025ರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಉಪ ನಾಯಕನನ್ನಾಗಿ ದಕ್ಷಿಣ ಆಫ್ರಿಕಾದ ಆಟಗಾರ ಫಾಪ್ ಡು ಪ್ಲೆಸಿಸ್ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಪ್ರಾಂಚೈಸಿ ಹೇಳಿಕೊಂಡಿದೆ.
ಇದೇ ಮಾರ್ಚ್ 22 ರಂದು ಆರಂಭವಾಗುವ IPL ಸೀಸನ್ 18ರ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕ್ಯಾಪ್ಟನ್ ಆಗಿ ಅಕ್ಷರ್ ಪಟೇಲ್ ಅವರನ್ನು ಈಗಾಗಲೇ ನೇಮಕ ಮಾಡಲಾಗಿದೆ. ಇದೀಗ ಡುಪ್ಲೆಸಿಸ್ ಅವರನ್ನು ವೈಸ್ ಕ್ಯಾಪ್ಟನ್ ಮಾಡಲಾಗಿದ್ದು, ಈ ಬಾರಿ ಕಪ್ ಗೆಲ್ಲುವ ತಂತ್ರಗಳನ್ನು ತಂಡ ಆಳವಡಿಸಿಕೊಳ್ಳುತ್ತಿದೆ.
ಕಳೆದ ಮೂರು ಸೀಸನ್ಗಳಲ್ಲಿ ಆರ್ಸಿಬಿ ತಂಡದ ನಾಯಕತ್ವ ವಹಿಸಿಕೊಂಡಿದ್ದ ಫಾಪ್ ಡುಪ್ಲೆಸಿಸ್ ಕಪ್ ಗೆಲ್ಲುವಲ್ಲಿ ವಿಫಲರಾಗಿದ್ದರು. ಹೀಗಾಗಿ, ಆರ್ಸಿಬಿ ಪ್ರಾಂಚೈಸಿ ಫಾಪ್ ಡುಪ್ಲೆಸಿಸ್ ಅವರನ್ನು ಈ ಬಾರಿಯ ಸೀಸನ್ನಿಂದ ಕೈಬಿಟ್ಟಿತ್ತು.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಫಾಪ್ ಡುಪ್ಲೆಸಿಸ್ ಯಾರೊಂದಿಗಾದರೂ ಫೋನ್‌ನಲ್ಲಿ ಮಾತನಾಡುತ್ತಿರುವ ದೃಶ್ಯ ಕಂಡುಬಂದಿದೆ. ಮಾತನಾಡುವಾಗ ಅವರೇ, "ಹೌದು, ನಾನು ಡೆಲ್ಲಿ ಕ್ಯಾಪಿಟಲ್ಸ್‌ನ ಉಪನಾಯಕ" ಎಂದು ಹೇಳಿದ್ದಾರೆ.ಇನ್ನು ಈ ಬಾರಿಯ ಹರಾಜಿನ ವಿಷಯಕ್ಕೆ ಬಂದಾಗ, ಡೆಲ್ಲಿ ಕ್ಯಾಪಿಟಲ್ಸ್ ಡುಪ್ಲೆಸಿಸ್ ಅವರನ್ನು 2 ಕೋಟಿ ರೂ.ಗಳಿಗೆ ಬಿಡ್ ಮಾಡಿ ತಮ್ಮ ತಂಡಕ್ಕೆ ಸೇರಿಸಿಕೊಂಡಿದೆ.(ಏಜೆನ್ಸೀಸ್)