

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ಬಾಂಗ್ಲಾದೇಶ (Bangladesh) ನಡುವಿನ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಆತಿಥೇಯರು ಪ್ರವಾಸಿ ತಂಡದ ಎದುರು ಮತ್ತೊಮ್ಮೆ ಮೇಲುಗೈ ಸಾಧಿಸಿದ್ದು, ಟಿ20 ಕ್ರಿಕೆಟ್ (T20 Cricket) ಇತಿಹಾಸದಲ್ಲೇ ಅತಿ ಹೆಚ್ಚು ರನ್ಗಳಿಸುವ ಮೂಲಕ ವಿಶ್ವದಾಖಲೆಯನ್ನು (World Record) ಬರೆದಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ (Team India) ನಾಯಕ ಸೂರ್ಯಕುಮಾರ್ (Suryakumar Yadav) ತಂಡದಲ್ಲಿ ಒಂದು ಬದಲಾವಣೆ ಮಾಡಿರುವುದಾಗಿ ಹೇಳಿದರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಆರಂಭಿಕ ಸಂಜು ಸ್ಯಾಮ್ಸನ್ (Sanju Samson) (111 ರನ್, 47 ಎಸೆತ, 11 ಬೌಂಡರಿ, 8 ಸಿಕ್ಸರ್) ಚೊಚ್ಚಲ ಶತಕ, ಸೂರ್ಯಕುಮಾರ್ ಯಾದವ್ (Suryakumar Yadav) (75 ರನ್, 35 ಎಸೆತ, 8ಬೌಂಡರಿ, 5 ಸಿಕ್ಸರ್) ಕ್ಯಾಪ್ಟನ್ ನಾಕ್, ಹಾರ್ದಿಕ್ ಪಾಂಡ್ಯ (Hardik Pandya) (47 ರನ್, 18 ಎಸೆತ, 4 ಬೌಂಡರಿ, 4 ಸಿಕ್ಸರ್) ಸ್ಫೋಟಕ ಆಟದ ಫಲವಾಗಿ ಭಾರತ ತಂಡವು 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 297 ರನ್ ಗಳಿಸುವ ಮೂಲಕ ಟಿ20 ಕ್ರಿಕೆಟ್ (T20 Cricket) ಇತಿಹಾಸದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದೆ.
ಕಳೆದ ಕೆಲ ದಿನಗಳಿಂದ ರನ್ ಗಳಿಸಲು ಹೆಣಗಾಡುತ್ತಿದ್ದ ಸಂಜು ಸ್ಯಾಮ್ಸನ್ಗೆ (Sanju Samson) ಟಿ20 ಸರಣಿಯ (T20 Series) ಅಂತಿಮ ಪಂದ್ಯ ಮಾಡು ಇಲ್ಲವೇ ಮಡಿಯಾಗಿತ್ತು. ಇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರಷ್ಟೇ ಮುಂಬರುವ ಸರಣಿಗಳಲ್ಲಿ ಸ್ಥಾನ ಖಚಿತವಾಗುಬಹುದು ಎಂದು ಹೇಳಲಾಗಿತ್ತು. ಆದರೆ ತನಗೆ ಸಿಕ್ಕಿದ ಕೊನೆಯ ಅವಕಾಶವನ್ನು ಸ್ಮರಣೀಯಗೊಳಿಸಿದ ಸಂಜು ದಾಖಲೆಯ ಶತಕ ಸಿಡಿಸಿದರು. ಈ ಮೂಲಕ ತನ್ನ ಮೇಲೆ ನಾಯಕ ಹಾಗೂ ತಂಡದ ಮ್ಯಾನೇಜ್ಮೆಂಟ್ ಇಟ್ಟಿದ್ದ ನಂಬಿಕೆಯನ್ನೂ ಉಳಿಸಿಕೊಂಡಿದ್ದಾರೆ.
ಸಂಜು (Sanju Samson) ಸಿಡಿಸಿದ ಈ ಶತಕ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ (Intertnational T20) ಭಾರತದ ಪರ ದಾಖಲಾದ ಎರಡನೇ ವೇಗದ ಶತಕವಾಗಿದೆ. 35 ಎಸೆತಗಳಲ್ಲಿ ಶತಕ ಸಿಡಿಸಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿ ಈ ದಾಖಲೆ ಇದೆ. ಇದಲ್ಲದೆ ಈ ಹಿಂದೆ 45 ಎಸೆತಗಳಲ್ಲಿ ಶತಕ ಸಿಡಿಸಿ ಎರಡನೇ ಸ್ಥಾನದಲ್ಲಿದ್ದ ಸೂರ್ಯಕುಮಾರ್ ಯಾದವ್ರನ್ನು ಸಂಜು ಸ್ಯಾಮ್ಸನ್ ಹಿಂದಿಕ್ಕಿದ್ದಾರೆ. ಅಷ್ಟೇ ಅಲ್ಲ, ಬಾಂಗ್ಲಾದೇಶ ವಿರುದ್ಧ ಟಿ20 ಅಂತಾರಾಷ್ಟ್ರೀಯ ಶತಕ ಸಿಡಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಸಂಜು ಪಾತ್ರರಾಗಿದ್ದಾರೆ.