

ವೆಲ್ಲಿಂಗ್ಟನ್: ಭಾರತ-ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಪಂದ್ಯ ರದ್ದಾಗುತ್ತಿದ್ದಂತೆ, ಎರಡೂ ದೇಶಗಳ ತಂಡದ ಆಟಗಾರರು ಫುಟ್ಬಾಲ್ ಆಡಿ, ಎಂಜಾಯ್ ಮಾಡಿದ್ದಾರೆ. ಇದೀಗ ಈ ವಿಡಿಯೋವನ್ನು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಭಾರತ-ನ್ಯೂಜಿಲೆಂಡ್ ನಡುವಣ ಮೊದಲ ಟಿ-20 ಪಂದ್ಯ ವೆಲ್ಲಿಂಗ್ಟನ್ ಮೈದಾನದಲ್ಲಿ ನಿಗಧಿಯಾಗಿತ್ತು. ಆದರೆ ವಿಪರೀತ ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ಕೂಡಾ ನಡೆಯದೆ ಮೊದಲ ಪಂದ್ಯ ರದ್ದಾಗಿದೆ. ಪಂದ್ಯ ರದ್ದಾಗುತ್ತಿದ್ದಂತೆ ಎರಡೂ ತಂಡಗಳ ನಾಯಕರು ಹಸ್ತಲಾಘವ ಮಾಡಿಕೊಂಡರು.
ಟಿ-20 ವಿಶ್ವಕಪ್ ಮುಕ್ತಾಯವಾಗುತ್ತಿದ್ದಂತೆ, ಟೀಮ್ ಮ್ಯಾನೇಜ್ಮೆಂಟ್ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆ.ಎಲ್.ರಾಹುಲ್ಗೆ ವಿಶ್ರಾಂತಿ ನೀಡಿತ್ತು. ಹೀಗಾಗಿ ಯುವ ಆಟಗಾರರಾದ ಶುಭಮನ್ ಗಿಲ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್ ಮುಂತಾದ ಆಟಗಾರರು ಸರಣಿಯಲ್ಲಿ ಅವಕಾಶ ಪಡೆದುಕೊಂಡಿದ್ದರು. (ಏಜೆನ್ಸೀಸ್)