ಈ ಉದ್ಘಾಟನಾ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್, ಭಾರತದ ಪ್ರಾಚೀನ ಅಭ್ಯಾಸವನ್ನು ಜಾಗತಿಕ ಸ್ಪರ್ಧಾತ್ಮಕ ಕ್ರೀಡೆಯಾಗಿ ಪರಿವರ್ತಿಸುವಲ್ಲಿ ಮತ್ತು ಒಲಿಂಪಿಕ್ ಮನ್ನಣೆಯತ್ತ ಸಾಗುವಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಆಯುಷ್ ಸಚಿವಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ (SAI), ಗುಜರಾತ್ ಕ್ರೀಡಾ ಪ್ರಾಧಿಕಾರ, ಗುಜರಾತ್ ಪ್ರವಾಸೋದ್ಯಮ ಮತ್ತು ಗುಜರಾತ್ ಯೋಗಾಸನ ಕ್ರೀಡಾ ಸಂಘದ ಸಹಯೋಗದೊಂದಿಗೆ ಈ ಚಾಂಪಿಯನ್‌ಶಿಪ್ ನಡೆಯುತ್ತಿದೆ. ಭಾರತವು ಒಟ್ಟು 122 ಸದಸ್ಯರ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದು, ಆರು ವಯೋಮಿತಿ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ.