

ನವದೆಹಲಿ: ಟೀಮ್ ಇಂಡಿಯಾದ ನೂತನ ಕೋಚ್ ಆಗಿ ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ನೇಮಿಸಿದೆ. ಇತ್ತೀಚಿನ ವರ್ಷಗಳಲ್ಲಿ ಭಾರತ ತಂಡಕ್ಕೆ ಸಿಕ್ಕಿರುವ ಸಕ್ಸಸ್ ಮುಂದುಬವರೆಸುವ ನಿಟ್ಟಿನಲ್ಲಿ ಬಿಸಿಸಿಐ ಗೌತಮ್ ಗಂಭೀರ್ರನ್ನು ನೇಮಿಸಿದ್ದು, ಮಾಜಿ ಆರಂಭಿಕ ಆಟಗಾರ ಕೋಚ್ ಆಗಿ ಯಶ ಕಾಣಲಿದ್ದಾರಾ ಎಂದು ಕಾದು ನೋಡಬೇಕಿದೆ.
ಟೀಮ್ ಇಂಡಿಯಾ ನೂತನ ಕೋಚ್ ಆಗಿ ನೇಮಕಗೊಳ್ಳುತ್ತಿದ್ದಂತೆ ಮೇಜರ್ ಸರ್ಜರಿಗೆ ಮುಂದಾಗಿರುವ ಗೌತಮ್ ಗಂಭೀರ್ ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳು ಮುಂದಾಗಿದ್ದು, ಅಸ್ಟಿಸೆಂಟ್ ಕೋಚ್ ಹುದ್ದೆಗೆ ಅಭಿಷೇಕ್ ನಾಯರ್ ಹಾಗೂ ಆರ್ಸಿಬಿ ತಂಡದ ಮಾಜಿ ಆಟಗಾರ, ದಾವಣಗೆರೆ ಎಕ್ಸ್ಪ್ರೆಸ್ ಎಂದೇ ಖ್ಯಾತಿ ಪಡೆದಿರುವ ವಿನಯ್ ಕುಮಾರ್ರನ್ನು ಭಾರತ ತಂಡದ ಬೌಲಿಂಗ್ ಕೋಚ್ ಆಗಿ ನೇಮಿಸಲು ಗೌತಮ್ ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಸಹಾಯಕ ಸಿಬ್ಬಂದಿ ನೇಮಕ ಸಂಬಂಧ ಗೌತಮ್ ಈಗಾಗಲೇ ಬಿಸಿಸಿಐಗೆ ಲಿಸ್ಟ್ ಒಂದನ್ನು ನೀಡಿದ್ದು, ಅಭಿಷೇಕ್ ನಾಯರ್ರನ್ನು ಸಹಾಯಕ ಕೋಚ್ ಹುದ್ದೆಗೆ ವಿನಯ್ ಕುಮಾರ್ರನ್ನು ಬೌಲಿಂಗ್ ಕೋಚ್ ಆಗಿ ನೇಮಿಸುವಂತೆ ಗಂಭೀರ್ ಸಲ್ಲಿಸಿರುವ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಬಿಸಿಸಿಐ ಕೂಡ ಇದಕ್ಕೆ ಅನುಮೋದನೆ ನೀಡಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಪ್ರಕಟಸಿರುವ ಸಾಧ್ಯತೆ ದಟ್ಟವಾಗಿದೆ.
ನನ್ನ ದೇಶಕ್ಕೆ ಗೌರವ ಸಲ್ಲಿಸಲು ಅವಕಾಶ ಸಿಕ್ಕಿರುವುದು ತುಂಬಾ ಸಂತೀಷವಾಗಿದೆ. ಭಾರತ ತಂಡಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ರಾಹುಲ್ ದ್ರಾವಿಡ್ ಹಾಗೂ ಸಹಾಯಕ ಸಿಬ್ಬಂದಿಗೆ ನಾನು ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಆಟವಾಡುತ್ತಿದ್ದಾಗ ನಾನು ಭಾರತದ ಜೆರ್ಸಿ ಧರಿಸಲು ತುಂಬಾ ಖುಷಿಪಡುತ್ತಿದ್ದೆ. ಈಗ ಕೋಚ್ ಆಗಿ ಹೊಸ ಪಾತ್ರ ನಿಭಾಯಿಸಲು ಉತ್ಸುಕನಾಗಿದ್ದೇನೆ ಎಂದು ಕೋಚ್ ಹುದ್ದೆಗೆ ಆಯ್ಕೆಯಾದ ಬಳಿಕ ಗೌತಮ್ ಗಂಭೀರ್ ಹೇಳಿದ್ದಾರೆ.