ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ; ಟೀಮ್​ ಇಂಡಿಯಾ ಕೋಚ್​ ಹುದ್ದೆ ಕುರಿತು​ ಶಾಕಿಂಗ್ ಹೇಳಿಕೆ ಕೊಟ್ಟ ಗೌತಮ್​ ಗಂಭೀರ್

Gautham Gambhir
Published on

ನವದೆಹಲಿ: ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯುತ್ತಿರುವ ಚುಟುಕು ವಿಶ್ವ ಸಮರದಲ್ಲಿ ಟೀಮ್​ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದ್ದು, ಕಪ್​ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದ್ದು, ರೋಹಿತ್​ ಪಡೆ ಪ್ರಶಸ್ತಿ ಬರವನ್ನು ನೀಗಿಸಲಿದೆಯಾ ಎಂದು ಕಾದು ನೋಡಬೇಕಿದೆ. ಇತ್ತ ವಿಶ್ವಕಪ್​ ಮುಗಿಯುತ್ತಿದ್ದಂತೆ ಟೀಮ್​ ಇಂಡಿಯಾ ಕೋಚ್​ ಆಗಿ ರಾಹು್​ ದ್ರಾವಿಡ್​ ಅವರ ಅವಧಿ ಮುಕ್ತಾಯವಾಗಲಿದ್ದು, ಅವರ ಸ್ಥಾನಕ್ಕೆ ಹೊಸಬರನ್ನು ನೇಮಿಸಲು ಬಿಸಿಸಿಐ ಹುಡಕಾಟ ನಡೆಸುತ್ತಿದೆ.

ಇತ್ತ ಟೀಮ್​ ಇಂಡಿಯಾ ನೂತನ ಕೋಚ್​ ಆಗಿ ಗೌತಮ್​ ಗಂಭೀರ್​ ನೇಮಕವಾಗಲಿದ್ದಾರೆ ಎಂದು ಹೇಳಲಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಎಂದು ತಿಳಿದು ಬಂದಿದೆ. ಕೋಚ್​ ಹುದ್ದೆ ಸಂಬಂಧ ಬಿಸಿಸಿಐ ಈಗಾಗಲೇ ಗೌತಮ್​ ಗಂಭೀರ್​ ಅವರೊಂದಿಗೆ ಹಲವು ಸುತ್ತುಗಳ ಮಾತುಕತೆ ನಡೆಸಿದ್ದು, ಗೌತಮ್​ ಗ್ರೀನ್​ ಸಿಗ್ನಲ್​ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಈ ಕುರಿತು ಮಾತನಾಡಿರುವ ಗೌತಮ್​ ಗಂಭೀರ್​ ಈ ರೀತಿಯ ಪ್ರಶ್ನೆಗಳನ್ನು ಯಾಕೆ ಕೇಳುತ್ತಿದ್ದೀರಾ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದಾರೆ.

ಈ ಕುರಿತು ಮಾತನಾಡಿರುವ ಗೌತಮ್​ ನಾನಿನ್ನೂ ಅಷ್ಟು ದೂರ ಯೋಚಿಸಿಲ್ಲ. ನೀವುಗಳು ನನಗೆ ಪ್ರತಿಬಾರಿಯೂ ಕಷ್ಟದ ಪ್ರಶ್ನೆಗಳನ್ನು ಕೇಳುವುದರಿಂದ ನನಗೆ ಉತ್ತರಿಸುವುದು ಕಷ್ಟವಾಗುತ್ತಿದೆ. ಸದ್ಯಕ್ಕೆ ನಾನು ಇಲ್ಲಿರುವುದೇ ನನಗೆ ಸಂತೋಷ ನೀಡಿದೆ. ಐಪಿಎಲ್​​ನಲ್ಲಿ ಕೆಕೆಆರ್​ ಅದ್ಭುತ ಪ್ರಯಾಣವನ್ನು ಮಾಡಿದ್ದು, ಮೊದಲಿಗೆ ಅದನ್ನು ಆನಂದಿಸೋಣ.

ಒಂದು ತಂಡ ಕ್ರೀಡೆಯಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿದೆ. ಇದು ಆ ಸಂಸ್ಥೆಯ ಪಾಲಿಗೆ ಅತ್ಯಂತ ಪ್ರಮುಖ ಅಂಶವಾಗಿದ್ದು, ತಂಡದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯು ಒಂದಿಲ್ಲೊಂದು ಪಾತ್ರವನ್ನು ನಿಭಾಯಿಸುವ ಮೂಲಕ ತನ್ನ ಕೊಡುಗೆಯನ್ನು ನೀಡುತ್ತಾನೆ. ಈ ರೀತಿ ಇದ್ದಲ್ಲಿ ತಂಡದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇರುವುದಿಲ್ಲ ಮತ್ತು ಎಲ್ಲರನ್ನೂ ಸಮಾನವಾಗಿ ಕಾಣಬಹುದಾಗಿದೆ ಎಂದು ಹೇಳಿದ್ದಾರೆ.

ಟೀಮ್​ ಇಂಡಿಯಾ ಕೋಚ್​ ಹುದ್ದೆ ಕೇಳಲಾದ ಪ್ರಶ್ನೆಗೆ ಇದು ತುಂಬಾ ಕಠಿಣವಾಗಿದ್ದು, ಉತ್ತರಿಸಲು ಕಷ್ಟವಾಗುತ್ತಿದೆ ಎಂದು ಹೇಳುವ ಮೂಲಕ ಗೌತಮ್​ ಗಂಭೀರ್​ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ. ಟಿ20 ವಿಶ್ವಕಪ್​ ಬಳಿಕ ಟೀಮ್​ ಇಂಡಿಯಾ ಕೋಚ್​ ಯಾರಾಗಲಿದ್ದಾರೆ ಎಂಬ ಅಂತಿಮ ಚಿತ್ರಣ ಹೊರಬೀಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net