India vs Bangla t-20: ಪಂದ್ಯ ವೇಳೆ ಸೆಕ್ಷನ್ 163 ರ ಅಡಿ ನಿರ್ಬಂಧಕಾಜ್ಞೆ ! ಕಾರಣ ಗೊತ್ತೇ?

India vs Bangla t-20
India vs Bangla t-20
Published on

ಗ್ವಾಲಿಯರ್: ಭಾರತ ಮತ್ತು ಬಾಂಗ್ಲಾ ನಡುವಿನ ಅಂತರರಾಷ್ಟ್ರೀಯ ಟಿ-20(India vs Bangla t-20) ಪಂದ್ಯ ಅಕ್ಟೋಬರ್ 6 ರಂದು ಗ್ವಾಲಿಯರ್ ನಲ್ಲಿ ನಡೆಯಲಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ರುಚಿಕಾ ಚೌಹಾಣ್ ಅವರು ಭಾರತೀಯ ನಾಗರಿಕ ರಕ್ಷಣಾ ಸಂಹಿತೆಯ ಸೆಕ್ಷನ್ 163 ರ ಅಡಿಯಲ್ಲಿ ಮಹತ್ವದ ನಿರ್ಬಂಧಿತ ಆದೇಶವನ್ನು ಹೊರಡಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿಗಳ ವರದಿಯ ಆಧಾರದ ಮೇಲೆ, ಗ್ವಾಲಿಯರ್ ಜಿಲ್ಲೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ, ಜನರ ಸುರಕ್ಷತೆ ಮತ್ತು ಆಸ್ತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅವರು ಈ ನಿರ್ಬಂಧಿತ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಅಕ್ಟೋಬರ್ 7ರವರೆಗೆ ಜಾರಿಯಲ್ಲಿರುತ್ತದೆ. ಉಲ್ಲಂಘನೆಯು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಲಿದೆ ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಬಾಂಗ್ಲಾದೇಶದಲ್ಲಿ ಇತ್ತೀಚಿನ ಘಟನೆಗಳನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗ್ವಾಲಿಯರ್‌ನಲ್ಲಿ ಮೆರವಣಿಗೆ, ಪ್ರತಿಭಟನೆ, ಪ್ರದರ್ಶನಗಳು ಮತ್ತು ಪ್ರತಿಕೃತಿ ದಹನವನ್ನು ನಡೆಸುತ್ತವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಮ್ಮ ವರದಿಯ ಮೂಲಕ ತಿಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ಬಂಧಕಾಜ್ಞೆ ಹೊರಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net