

ನವದೆಹಲಿ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಪ್ರೇಮಿಗಳ ದಿನದಂದು ಉದಯ್ ಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಹಾರ್ದಿಕ್ ಪಾಂಡ್ಯಾ, ನತಾಶಾ ಸ್ಟಾಂಕೋವಿಕ್ ಜೊತೆಗೆ ಮೂರು ವರ್ಷಗಳ ಹಿಂದೆಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ 2020ರ ಮೇ 31ರಂದು ಅವರು ವಿವಾಹವಾಗಿದ್ದರು. ಈ ದಂಪತಿಗೆ ಒಂದು ಮಗು ಕೂಡ ಇದೆ.
ತಮ್ಮ ಮಗುವಿಗೆ ಮೂರು ತುಂಬಿಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ಪಾಂಡ್ಯಾ ದಂಪತಿ ಮಗನ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹವಾಗಲು ನಿರ್ಧರಿಸಿದ್ದರು. ಅಂದು ಪಾಂಡ್ಯಾ ರಿಜಿಸ್ಟರ್ ಮದುವೆ ಆಗಿದ್ದರು. ಇದೀಗ ಸಂಪ್ರದಾಯದಂತೆ ಮದುವೆ ಆಗಿದ್ದಾರೆ. ಹಾರ್ದಿಕ್ ಮದುವೆ ಕಾರ್ಯಕ್ರಮದಲ್ಲಿ ಕೆಲ ಆಪ್ತರು ಮಾತ್ರ ಪಾಲ್ಗೊಂಡಿದ್ದಾರೆ.