

ನ್ಯೂಯಾರ್ಕ್: ಇಲ್ಲಿನ ನಸೌ ಕೌಂಟಿ ಇಂಟರ್ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 8ನೇ ಪಂದ್ಯದಲ್ಲಿ ಭಾರತ ಹಾಗೂ ಐರ್ಲೆಂಡ್ ತಂಡಗಳು ಸೆಣಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ, ಟೀಂ ಇಂಡಿಯಾ ವೇಗಿಗಳ ಮಾರಕ ದಾಳಿಗೆ ನಲುಗಿ ಕೇವಲ 96 ರನ್ಗಳಿಗೆ ಆಲೌಟ್ ಆಗಿದೆ. ಐರ್ಲೆಂಡ್ ತಂಡ ಫೂರ್ಣ 20 ಓವರ್ಗಳನ್ನು ಆಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 16 ಓವರ್ಗಳಿಗೆ ತನ್ನೇಲ್ಲ ವಿಕೆಟ್ ಕಳೆದುಕೊಂಡ ಐರ್ಲೆಂಡ್ 96 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಉಪನಾಯಕ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಪರ ಅತಿ ಹೆಚ್ಚು 3 ವಿಕೆಟ್ ಕಬಳಿಸಿದರು.
ಟೀಂ ಇಂಡಿಯಾ: ರೋಹಿತ್ ಶರ್ಮಾ (C), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (WK), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಫ್ ಸಿಂಗ್, ಮೊಹಮ್ಮದ್ ಸಿರಾಜ್
ಐರ್ಲೆಂಡ್ : ಪಾಲ್ ಸ್ಟಿರ್ಲಿಂಗ್ (C), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್ (WK), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಬೆಂಜಮಿನ್ ವೈಟ್.