ಸಿಎಸ್‌ಕೆ ತಂಡಕ್ಕೆ ಹ್ಯಾಟ್ರಿಕ್ ಸೋಲು; ಗೆಲುವಿನ ನಗು ಬೀರಿದ ಸನ್​ರೈಸರ್ಸ್

Hyderabad
Published on

ದುಬೈ: ನಾಯಕ ಎಂಎಸ್ ಧೋನಿ (47*ರನ್, 36 ಎಸೆತ, 4 ಬೌಂಡರಿ, 1 ಸಿಕ್ಸರ್) ಅಂತಿಮ ಕ್ಷಣದವರೆಗೆ ಗೆಲುವಿಗಾಗಿ ಹೋರಾಡಿದರೂ ಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್-13ರಲ್ಲಿ ಹ್ಯಾಟ್ರಿಕ್ ಸೋಲನುಭವಿಸಿತು. ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ ತಂಡ ಸನ್‌ರೈಸರ್ಸ್‌ ಹೈದರಾಬಾದ್ ತಂಡಕ್ಕೆ 7 ರನ್‌ಗಳಿಂದ ಶರಣಾಯಿತು. ಇದರೊಂದಿಗೆ ಸಿಎಸ್‌ಕೆ ತಂಡ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿಯೇ ಉಳಿದರೆ, ಸನ್‌ರೈಸರ್ಸ್‌ ಸತತ 2ನೇ ಜಯ ದಾಖಲಿಸಿ 4ನೇ ಸ್ಥಾನಕ್ಕೇರಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್‌ ತಂಡ ಯುವ ಬ್ಯಾಟ್ಸ್‌ಮನ್ ಪ್ರಿಯಂ ಗಾರ್ಗ್ (51*ರನ್, 26 ಎಸೆತ, 6 ಬೌಂಡರಿ, 1 ಸಿಕ್ಸರ್) ಕಟ್ಟಿದ ಜವಾಬ್ದಾರಿಯುತ ಇನಿಂಗ್ಸ್ ಲವಾಗಿ 5 ವಿಕೆಟ್‌ಗೆ 164 ರನ್ ಕಲೆಹಾಕಿತು. ಪ್ರತಿಯಾಗಿ ಧೋನಿ ಹಾಗೂ ರವೀಂದ್ರ ಜಡೇಜಾ (50 ರನ್, 3 ಎಸೆತ, 5 ಬೌಂಡರಿ, 2 ಸಿಕ್ಸರ್) ಪ್ರತಿಹೋರಾಟದ ನಡುವೆಯೂ ಚೆನ್ನೈ ತಂಡ 5 ವಿಕೆಟ್‌ಗೆ 157 ರನ್ ಗಳಿಸಲಷ್ಟೇ ಶಕ್ತವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net