ಐತಿಹಾಸಿಕ ಐಪಿಎಲ್ ವಿಜಯೋತ್ಸವ; ಆರ್​ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಸಿಎಂ| IPL-2025

Untitled design (2)
Published on

ಐತಿಹಾಸಿಕ ಐಪಿಎಲ್ ವಿಜಯೋತ್ಸವಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಭಿನಂದನೆಗಳು ಎಂದು ಸಿಎಂ ಟ್ವೀಟ್​ ಮೂಲಕ ಬರೆದುಕೊಂಡಿದ್ದಾರೆ. ಕೊನೆಗೂ ಕನಸು ನನಸಾಗಿದೆ, ಈ ಸಲಾ ಕಪ್ ನಮ್ದೆ, ಅದ್ಭುತ ಪ್ರದರ್ಶನದಿಂದ ಹಿಡಿದು ಅಚಲ ಚೈತನ್ಯದವರೆಗೆ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೊತ್ತಿಸಿದೆ ಮತ್ತು ಪ್ರಪಂಚದಾದ್ಯಂತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಸಿಎಂ ಎಕ್ಸ್​ ಖಾತೆಯಲ್ಲಿ ಅಭಿನಂದಿಸಿದ್ದಾರೆ.

IPL-2025 | ಫೈನಲ್​​​ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್​ಸಿಬಿ ರೋಚಕ ಗೆಲುವು ಸಾಧಿಸಿದೆ. ಇನ್ನೂ ಆರ್​ಸಿಬಿ ಗೆಲುವಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬೆಂಗಳೂರು ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಇಂದು (ಜೂ.03) ಅಹಮದಾಬಾದ್‌ನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿ ಸೆಣೆಸಾಟ ನಡೆಸಿದವು.

ನಿರ್ಣಾಯಕ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 190 ರನ್​ಗಳಿಸಿತು. ವಿರಾಟ್ ಕೊಹ್ಲಿ 43, ಪಾಟೀದಾರ್ 26 ಲಿವಿಂಗ್​ಸ್ಟೋನ್ 25, ಜಿತೇಶ್ ಶರ್ಮಾ ಅಜೇಯ ರನ್​ಗಳಿಸಿ ಬೃಹತ್ ಮೊತ್ತಕ್ಕೆ ಕಾರಣರಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net