

ದೆಹಲಿ: ಶ್ರೀಲಂಕಾ ಮತ್ತು ನೆದರ್ಲ್ಯಾಂಡ್ಸ್ 2023ರ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆದ ಬೆನ್ನಲ್ಲೇ ಐಸಿಸಿಯು ಟೂರ್ನಿಯ ನವೀಕರಿಸಿದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
2023ರ ಅಕ್ಟೋಬರ್ನಲ್ಲಿ ಆರಂಭವಾಗಲಿರುವ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿದ್ದು, ಶ್ರೀಲಂಕಾ ಅಕ್ಟೋಬರ್ 7ರಂದು ದೆಹಲಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಅಭಿಯಾನವನ್ನು ಮತ್ತು ಅಕ್ಟೋಬರ್ 6ರಂದು ಹೈದರಾಬಾದ್ನಲ್ಲಿ ಪಾಕಿಸ್ತಾನ ವಿರುದ್ಧ ನೆದರ್ಲೆಂಡ್ ತನ್ನ ಅಭಿಯಾನವನ್ನು ಆರಂಭಿಸಲಿದೆ.