ಐಸಿಸಿ ಟಿ20 ರ‌್ಯಾಂಕಿಂಗ್‌ನಲ್ಲಿ ಏರಿಕೆ ಕಂಡ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್

rahul and virat for web
Published on

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಐಸಿಸಿ ಟಿ20 ರ‌್ಯಾಂಕಿಂಗ್‌ನ ಬ್ಯಾಟಿಂಗ್ ವಿಭಾಗದಲ್ಲಿ ತಲಾ ಒಂದು ಸ್ಥಾನ ಏರಿಕೆ ಕಂಡಿದ್ದಾರೆ. ಕೆಎಲ್ ರಾಹುಲ್ 3ನೇ ಸ್ಥಾನಕ್ಕೇರಿದರೆ, ವಿರಾಟ್ ಕೊಹ್ಲಿ 8ನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಚುಟುಕು ಕ್ರಿಕೆಟ್ ಸರಣಿಯಲ್ಲಿ ಕೊಹ್ಲಿ ಭರ್ಜರಿ ನಿರ್ವಹಣೆ ತೋರಿದ್ದರು. ಮಂಗಳವಾರ ಅಂತ್ಯಗೊಂಡ ಸರಣಿಯಲ್ಲಿ ಭಾರತ 2-1 ರಿಂದ ಗೆಲುವು ದಾಖಲಿಸಿತ್ತು.

816 ಪಾಯಿಂಟ್ಸ್ ಕಲೆಹಾಕಿರುವ ರಾಹುಲ್, ಎರಡನೇ ಸ್ಥಾನದಲ್ಲಿರುವ ಪಾಕ್‌ನ ಬಾಬರ್ ಅಜಮ್‌ಗಿಂತ (871) 55 ಪಾಯಿಂಟ್ಸ್ ಹಿಂದಿದ್ದಾರೆ. ಇಂಗ್ಲೆಂಡ್ ಬ್ಯಾಟ್ಸ್‌ಮನ್ ಡೇವಿಡ್ ಮನಲ್ (915) ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 697 ಅಂಕ ಸಂಪಾದಿಸಿದ್ದಾರೆ. ರಾಹುಲ್ ಮೊದಲ ಟಿ20 ಪಂದ್ಯದಲ್ಲಿ 51 ರನ್ ಸಿಡಿಸಿದರೆ, 2ನೇ ಪಂದ್ಯದಲ್ಲಿ 30 ರನ್ ಬಾರಿಸಿದ್ದರು. ಕಡೇ ಪಂದ್ಯದಲ್ಲಿ ಶೂನ್ಯ ಸುತ್ತಿದ್ದರು. ಕೊಹ್ಲಿ 3ನೇ ಪಂದ್ಯದಲ್ಲಿ 85 ರನ್ ಬಾರಿಸಿದ್ದರು.

ಬೌಲಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಂ ಜಂಪಾ ಎರಡು ಸ್ಥಾನ ಏರಿಕೆ ಕಂಡು 5ನೇ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್‌ನ ಕ್ರಿಸ್ ಜೋರ್ಡಾನ್ ಅಗ್ರ 10ರೊಳಿಗೆ ಸ್ಥಾನ ಪಡೆದರೆ, ರಶೀದ್ ಖಾನ್ ಹಾಗೂ ಮುಜೀಬ್ ಉರ್ ರೆಹಮಾನ್ ಕ್ರಮವಾಗಿ ಮೊದಲ ಹಾಗೂ 2ನೇ ಸ್ಥಾನ ದಲ್ಲಿದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ಅ್ಘಾನಿಸ್ತಾನದ ಮೊಹಮದ್ ನಬಿ 294 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್, ಆಸ್ಟ್ರೇಲಿಯಾ ಗ್ಲೇನ್ ಮ್ಯಾಕ್ಸ್‌ವೆಲ್ ನಂತರದ ಸ್ಥಾನದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net