

IND vs ENG Test: ಇಂದು ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಂಡಿದ್ದು, ಕೈಗೆ ಕಪ್ಪು ಪಟ್ಟಿ ಧರಿಸಿ ಟೀಮ್ ಇಂಡಿಯಾ ಅಖಾಡಕ್ಕಿಳಿದಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಇಂಗ್ಲೆಂಡ್ ಕ್ಯಾಪ್ಟನ್ ಬೆನ್ ಸ್ಟೋಕ್ಸ್, ಬ್ಯಾಟ್ ಮಾಡುವಂತೆ ಭಾರತಕ್ಕೆ ಆಹ್ವಾನಿಸಿದ್ದಾರೆ.
ಇದನ್ನೂ ಓದಿ: ದೆಹಲಿ-ಪುಣೆ ವಿಮಾನ ಹಾರಾಟ ರದ್ದುಗೊಳಿಸಿದ ಏರ್ ಇಂಡಿಯಾ! ಕಾರಣ ತಿಳಿಸಿ, ಪ್ರಯಾಣಿಕರಿಗೆ ಹಣ ವಾಪಾಸ್ | Air India ಹೆಡಿಂಗ್ಲಿಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧ ಗೆದ್ದು ಬೀಗಲು ಎದುರುನೋಡುತ್ತಿದೆ. ಈ ಮಧ್ಯೆ ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಜೀವಗಳಿಗೆ ನಮನ ಸಲ್ಲಿಸುವ ನಿಟ್ಟಿನಲ್ಲಿ ಭಾರತ ತಂಡದ ಆಟಗಾರರು ತಮ್ಮ ತೋಳಿಗೆ ಕಪ್ಪು ಪಟ್ಟಿ ಧರಿಸಿದ್ದಾರೆ. ಇದಲ್ಲದೆ, ಪಂದ್ಯದ ಆರಂಭಕ್ಕೂ ಮುನ್ನ ಎರಡೂ ತಂಡಗಳ ಆಟಗಾರರು 2 ನಿಮಿಷಗಳ ಕಾಲ ಮೌನಾಚರಣೆ ಮಾಡಿದರು.
ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ.
ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಾಂಗ್ ಮತ್ತು ಶೋಯೆಬ್ ಬಶೀರ್.