

ಅಹಮದಾಬಾದ್: ಟೆಸ್ಟ್ ಸರಣಿಯಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡಕ್ಕೆ ದಿಟ್ಟ ತಿರುಗೇಟು ನೀಡಿ ಬೀಗಿದ್ದ ವಿರಾಟ್ ಕೊಹ್ಲಿ ಪಡೆ ಚುಟುಕು ಕ್ರಿಕೆಟ್ ಸರಣಿಯಲ್ಲಿ ಆರಂಭದಲ್ಲೇ ಮುಗ್ಗರಿಸಿದೆ. ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂದು ಹೆಸರಾಗಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ, ಏಕದಿನ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ 8 ವಿಕೆಟ್ಗಳಿಂದ ಶರಣಾಯಿತು.
ಟೀಮ್ ಇಂಡಿಯಾ ಪಂದ್ಯವೇನೋ ಸೋತಿತು. ಆದರೆ, ಇದೇ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ನಿಗೂಢ ಯುವತಿ ಸಾಕಷ್ಟು ಮಂದಿಯ ಮನ ಗೆದ್ದಿದ್ದಾರೆ. ಹೀಗಾಗಿಯೇ ಸಾಮಾಜಿಕ ಜಾಲತಾಣದಲ್ಲಿ ಈಕೆ ವೈರಲ್ ಆಗಿದ್ದು, ಮಾಹಿತಿಗಾಗಿ ಹುಡುಕಾಟ ಜೋರಾಗಿದೆ. ಯಾರೀ ಸುಂದರಿ ಎಂದು ನೆಟ್ಟಿಗರು ಪರಿತಪಿಸುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಂದರಿಯ ಫೋಟೋ ಪೋಸ್ಟ್ ಮಾಡಿ ಹಾಸ್ಯಭರಿತ ಕಾಮೆಂಟ್ಗಳನ್ನು ಹರಿಬಿಡುತ್ತಾರೆ. ಕ್ಯಾಮೆರಾಮೆನ್ ಇಂದಿನ ಪಂದ್ಯದಲ್ಲಿ ನಿಜಕ್ಕೂ ದುಃಖಿತನಾಗಿಲ್ಲ ಎಂದು ನೆಟ್ಟಿಗರೊಬ್ಬರು ನಗೆ ಚಟಾಕಿ ಹಾರಿಸಿದ್ದಾರೆ. ಇನ್ನು ಕೆಲವರು ಇಂತಹ ಸುಂದರಿಯನ್ನು ಸೆರೆಹಿಡಿದ ಕ್ಯಾಮೆರಾಮೆನ್ಗೆ ಧನ್ಯವಾದಗಳು ಎಂದಿದ್ದಾರೆ.
ಇನ್ನು ಪಂದ್ಯದ ವಿಚಾರಕ್ಕೆ ಬಂದರೆ, ಟಾಸ್ ಜಯಿಸಿದ ಇಂಗ್ಲೆಂಡ್ ನಾಯಕ ಇವೊಯಿನ್ ಮಾರ್ಗನ್ ಆತಿಥೇಯ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದರು. ಶ್ರೇಯಸ್ ಅಯ್ಯರ್ (67 ರನ್, 48 ಎಸೆತ, 8 ಬೌಂಡರಿ, 1 ಸಿಕ್ಸರ್) ಸಮಯೋಚಿತ ನಿರ್ವಹಣೆ ನಡುವೆಯೂ ವೇಗಿ ಜೋಫ್ರಾ ಆರ್ಚರ್ (23ಕ್ಕೆ 3) ಮಾರಕ ದಾಳಿಗೆ ನಲುಗಿದ ಭಾರತ ತಂಡ 7 ವಿಕೆಟ್ಗೆ 124 ರನ್ ಗಳಿಸಲಷ್ಟೇ ಶಕ್ತವಾಯಿತು. ಪ್ರತಿಯಾಗಿ ಇಂಗ್ಲೆಂಡ್ ತಂಡ 15.3 ಓವರ್ಗಳಲ್ಲಿ 2 ವಿಕೆಟ್ಗೆ 130 ರನ್ ಗಳಿಸಿ ಜಯ ದಾಖಲಿಸಿತು. (ಏಜೆನ್ಸೀಸ್)