IND vs BAN ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಪ್ರಕಟ, ಐಪಿಎಲ್ ಸ್ಟಾರ್ಸ್​ಗೆ ಮಣೆ!

team india
Published on

ನವದೆಹಲಿ: ಪ್ರವಾಸಿ ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ಆರಂಭವಾಗಲಿದ್ದು, ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಸರಣಿಗೆ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ.

ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ ಕೂಡ ತಂಡದಲ್ಲಿದ್ದಾರೆ. ಅಲ್ಲದೆ, ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೆ, ಕಳೆದ ಐಪಿಎಲ್​ ನ ಸ್ಟಾರ್ ಆಟಗಾರರಾದ ನಿತೀಶ್ ರೆಡ್ಡಿ, ಮಯಾಂಗ್ ಯಾದವ್ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸ್ಟಾರ್ ವಿಕೆಟ್ ಕೀಪರ್ ಇಶಾನ್ ಕಿಶನ್ ಆಯ್ಕೆಗಾರರ ಮನಗೆಲ್ಲುವಲ್ಲಿ ವಿಫಲರಾಗಿದ್ದಾರೆ.

ಬಾಂಗ್ಲಾದೇಶ ವಿರುದ್ಧದ 3 ಟಿ20 ಪಂದ್ಯಗಳಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಾಕ್), ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಟಿ20 ಸರಣಿ ಅಕ್ಟೋಬರ್ 6 ರಿಂದ ಆರಂಭವಾಗಲಿದೆ. ಅಕ್ಟೋಬರ್‌ 6 (ಗ್ವಾಲಿಯರ್‌), ಅಕ್ಟೋಬರ್‌ 09 (ದೆಹಲಿ) ಮತ್ತು ಅಕ್ಟೋಬರ್ 12 (ಹೈದರಾಬಾದ್‌) ರಂದು ನಡೆಯಲಿದೆ.

ಶ್ರೀಲಂಕಾ ಸರಣಿಯಲ್ಲಿ ಆಡಿದ್ದ ಅನೇಕ ಆಟಗಾರರೂ ಈ ಸರಣಿಗೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ರಮುಖ ಆಟಗಾರರಾದ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ಅಕ್ಷರ್ ಪಟೇಲ್ ಮತ್ತು ಮೊಹಮ್ಮದ್ ಸಿರಾಜ್ ಅವರಿಗೆ ಮೇಲೆ ಹೇಳಿದಂತೆ ಕೆಲಸದ ಹೊರೆ ನಿರ್ವಹಣೆಗಾಗಿ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net