ಏಷ್ಯನ್ ಚಾಂಪಿಯನ್ಸ್ ಟ್ರೋಫಿ; ರೋಚಕ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತ ಪುರುಷರ ಹಾಕಿ ತಂಡ

hockey pic
Published on

ಹಾಲಿ ಚಾಂಪಿಯನ್ ಹಾಗೂ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಭಾರತ ಪುರುಷರ ಹಾಕಿ ತಂಡ, ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 4-3 ಗೋಲುಗಳಿಂದ ಮಣಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದೆ.

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಪಂದ್ಯದಲ್ಲಿ, ಭಾರತದ ಪರ ಹರ್ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್, ಗುರ್ಸಾಹಿಬ್‌ಜಿತ್ ಸಿಂಗ್ ಮತ್ತು ಆಕಾಶದೀಪ್ ಸಿಂಗ್ ತಲಾ ಒಂದು ಗೋಲುಗಳ ನೆರವಿನಿಂದ ಪಾಕ್‌ ವಿರುದ್ಧ ಭಾರತ ರೋಚಕ ಜಯ ದಾಖಲಿಸಿತು.

ನಿನ್ನೆ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಕೊರಿಯಾ 6-5 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿದರೆ, ಭಾರತವನ್ನು 3-5 ರಿಂದ ಜಪಾನ್ ಮಣಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net