

ಕಟಕ್: ಇಲ್ಲಿನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ (Team India) ಹಾಗೂ ಇಂಗ್ಲೆಂಡ್ (England) ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ತಂಡವು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.ಉಭಯ ತಂಡಗಳಲ್ಲೂ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.
ಕಟಕ್ನ ಬಾರಾಬತಿ ಕ್ರೀಡಾಂಗಣದಲ್ಲಿ ಎರಡನೇ ಏಕದಿನ ಪಂದ್ಯ ನಡೆಯುತ್ತಿದ್ದು, ಈ ಪಂದ್ಯವನ್ನು ಗೆದ್ದು ಟೀಮ್ ಇಂಡಿಯಾ ಸರಣಿಯನ್ನು ವಶಪಡಿಸಿಕೊಳ್ಳುವ ಹಂಬಲದಲ್ಲಿದೆ. ಇನ್ಣೂ ಮೊದಲ ಪಂದ್ಯದ ಸೋಲಿನಿಂದ ಹೊರಬಂದು ಸರಣಿಯಲ್ಲಿ 1-1 ಅಂತಕರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಇಂಗ್ಲೆಂಡ್ ಕಣಕ್ಕಿಳಿಯುತ್ತಿದ್ದು, ಪಂದ್ಯದ ಮೇಲೆ ಕ್ರೀಡಾಭಿಮಾನಿಗಳು ಸಾಕಷ್ಟು ನಿರೀಕ್ಷೆ ಇರಿಸಿದ್ದಾರೆ.
ಮುಂಬರುವ ಚಾಂಪಿಯನ್ಸ್ ಟ್ರೋಫಿ ನಿಟ್ಟಿನಲ್ಲಿ ಉಭಯ ತಂಡಗಳಿಗು ಈ ಪಂದ್ಯ ಮಹತ್ವದಾಗಿದ್ದು, ಸರಣಿಯಲ್ಲಿ ಗೆಲ್ಲುವ ಮೂಲಕ ಟೂರ್ನಿಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುವ ಇರಾದೆಯಲ್ಲಿವೆ. ಇನ್ನೂ ಆಡುವ 11ರ ಬಳಗದ ವಿಚಾರಕ್ಕೆ ಬರುವುದಾದರೆ ಉಭಯ ತಂಡಗಳಲ್ಲೂ ಬದಲಾವಣೆ ಮಾಡಲಾಗಿದ್ದು, ನಿರೀಕ್ಷೆಯಂತೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಯಶಸ್ವಿ ಜೈಸ್ವಲ್ ಬದಲಿಗೆ ವಿರಾಟ್ ಕೊಹ್ಲಿ, ಕುಲ್ದೀಪ್ ಯಾದವ್ ಬದಲಿಗೆ ವರುಣ್ ಚಕ್ರವರ್ತಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನೂ ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದ್ದು, ಮಾರ್ಕ್ ವುಡ್, ಗಸ್ ಆ್ಯಟ್ಕಿನ್ಸನ್ ಹಾಗೂ ಜೇಮಿ ಓವರ್ಟನ್ ಸ್ಥಾನ ಪಡೆದಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್ಟನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.