

ತಿರುವನಂತಪುಂ: ಭಾರತ - ಸೌತ್ ಆಫ್ರಿಕಾ ನಡುವಣ ಮೊದಲ ಟಿ-20 ಪಂದ್ಯದಲ್ಲಿ ಭಾರತ ತಂಡ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ದಿನೇಶ್ ಕಾರ್ತಿಕ್ ಕಂಬ್ಯಾಕ್ನಿಂದ ರಿಷಬ್ ಪಂತ್ ಸ್ಥಾನ ಕಳೆದುಕೊಳ್ಳುವಂತಾಗಿತ್ತು. ಹೀಗಾಗಿ ವಿಕೆಟ್ ಕೀಪರ್ ಸ್ಥಾನಕ್ಕಾಗಿ ಇವರಿಬ್ಬರ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇದೀಗ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಾಗೆ ವಿಶ್ರಾಂತಿ ನೀಡಿರುವುದರಿಂದ ಅವರ ಸ್ಥಾನದಲ್ಲಿ ರಿಷಬ್ ಪಂತ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ತಂಡದ ಅಭ್ಯಾಸದ ವೇಳೆ ಪ್ರಮುಖ ವೇಗಿ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ಅವರಿಗೆ ವಿಶ್ರಾಂತಿ ನೀಡಿದೆ ಎಂದು ತಂಡದ ಫಿಸಿಯೋ ತಿಳಿಸಿದ್ದಾರೆ.
ಹಿಂದಿನ ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆದ್ದುಕೊಂಡಿರುವ ವಿಶ್ವಾಸದಲ್ಲಿರುವ ಭಾರತ ತಂಡ ಸೌತ್ ಆಫ್ರಿಕಾವನ್ನು ಸೋಲಿಸುವ ಆತ್ಮವಿಶ್ವಾಸದಲ್ಲಿದೆ. ಮುಂಬರುವ ಟಿ-20 ವಿಶ್ವಕಪ್ ದೃಷ್ಟಿಯಿಂದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಾ ಹಾಗೂ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹರ್, ಆರ್ಶದೀಪ್ ಸಿಂಗ್.
ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿಕಾಕ್, ರಿಲೀ ರೋಸೌ, ಏಡನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಟಿಸ್ಟಾನ್ ಸ್ಟಬ್ಸ್, ಮಾರ್ಕೋ ಜಾನ್ಸೆನ್, ಕಗಿಸೊ ರಬಾಡ, ತಬರೇಜ್ ಶಮ್ಸಿ, ಅನ್ರಿಚ್ ನೋಕಿಯ.