ಪೇಪರ್ ಮೇಲಷ್ಟೇ ಬಲಿಷ್ಠವಾಗಿದ್ದಾರೆ, ನಮ್ಮವರು ಭರ್ಜರಿ ಪ್ರದರ್ಶನ ನೀಡುವುದು ಪಕ್ಕಾ; ಹೈವೋಲ್ಟೇಜ್ ಪಂದ್ಯದ ಬಗ್ಗೆ Pak ಮಾಜಿ ಆಟಗಾರನ ಹೇಳಿಕೆ ವೈರಲ್

Mohammed Amir
Published on

ನವದೆಹಲಿ: ಭಾರತ (Team India) ಹಾಗೂ ಪಾಕಿಸ್ತಾನ (Pakistan) ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್​ಡೌನ್ ಶುರುವಾಗಿದ್ದು, ಇಡೀ ವಿಶ್ವವೇ ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದೆ. ನ್ಯೂಜಿಲೆಂಡ್ ವಿರುದ್ಧ 60 ರನ್​ಗಳ ಸೋಲು ಕಂಡಿರುವ ಪಾಕಿಸ್ತಾನವು ಕಮ್​ಬ್ಯಾಕ್​ ಮಾಡಲು ಸಜ್ಜಾಗಿದ್ದರೆ, ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗೆದ್ದು ಶುಭಾರಂಭ ಕಂಡಿರುವ ಭಾರತ ತಂಡವು ತನ್ನ ಗೆಲುವಿನ ಓಟವನ್ನು ಮುಂದುವರೆಸಲು ಸಜ್ಜಾಗಿದೆ.

ಭಾರತ (Team India) ಹಾಗೂ ಪಾಕ್ (Pakistan) ನಡುವಿನ ಪಂದ್ಯ ಎಂದರೆ ಮಾಜಿ ಹಾಗೂ ಹಾಲಿ ಆಟಗಾರರು ಸರಣಿ ಹೇಳಿಕೆಗಳನ್ನು ನೀಡುತ್ತಾರೆ. ಇವರುಗಳು ನೀಡುವ ಹೇಳಿಕೆ ಕ್ರೀಡಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗುತ್ತದೆ. ಇದೀಗ ಪಾಕ್ ಕ್ರಿಕೆಟ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮೀರ್ ನೀಡಿರುವ ಹೇಳಿಕೆ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು, ಭಾರತವನ್ನು ತಂಡ ಪೇಪರ್ ಮೇಲಷ್ಟೇ ಬಲಿಷ್ಠ ಎಂದು ಹೇಳುವ ಮೂಲಕ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಮೊಹಮ್ಮದ್ ಅಮೀರ್, ಭಾರತ ತಂಡವು ಪೇಪರ್ ಮೇಲಷ್ಟೇ ಬಲಿಷ್ಠವಾಗಿರುವಂತೆ ಕಾಣುತ್ತದೆ. ದ್ವಿಪಕ್ಷೀಯ ಸರಣಿಯಲ್ಲಿ ಅವರ ಪ್ರದರ್ಶನವನ್ನು ನೋಡಿದರೆ, ಅವರು ಕೂಡ ಉತ್ತಮವಾಗಿ ಆಡಿದ್ದಾರೆ. ಆದರೆ ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಬಹಳಷ್ಟು ತಪ್ಪುಗಳನ್ನು ಮಾಡಿದೆ. ಇದು ನಮಗೆ (Pakistan) ವರದಾನವಾಗಲಿದೆ.

ಈಗ ಪಾಕಿಸ್ತಾನದೊಂದಿಗೆ ಒತ್ತಡದ ಪಂದ್ಯ ಆಡಬೇಕಿದೆ. ಒತ್ತಡದ ನಡುವೆ ಭಾರತ ಅದೇ ತಪ್ಪುಗಳನ್ನು ಪುನರಾವರ್ತಿಸಬಹುದು. ಪಾಕಿಸ್ತಾನ ತಂಡವು ತನ್ನ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ, ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಲಿದೆ. ಈ ಮೂಲಕ ಭಾರತ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರುವುದು ಖಚಿತವಾಗಿದೆ ಹೀಗಾಗಿ ಭಾರತ ವಿರುದ್ಧ ಪಾಕಿಸ್ತಾನ ತಂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಮೊಹಮ್ಮದ್ ಅಮೀರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net