Pak Vs Ban, CWC 2023: ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಇಂಜಮಾಮ್-ಉಲ್-ಹಕ್ ರಾಜೀನಾಮೆ!

Untitled design - 2023-10-30T203101.530
Published on

ಪಾಕಿಸ್ತಾನ: ಭಾರತದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ 2023 ರಲ್ಲಿ ಪಾಕಿಸ್ತಾನ ತಂಡ ನೀಡುತ್ತಿರುವ ಕಳಪೆ ಪ್ರದರ್ಶನದ ಬೆನ್ನಲ್ಲೇ ಮಾಜಿ ನಾಯಕ ಇಂಜಮಾಮ್-ಉಲ್-ಹಕ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಇಂಜಮಾಮ್ ತಮ್ಮ ವಿರುದ್ಧ ಪಾಕಿಸ್ತಾನದಲ್ಲಿ ಹಿತಾಸಕ್ತಿ ಸಂಘರ್ಷದ ಆರೋಪಗಳ ನಡುವೆ ಸೋಮವಾರ ಪಿಸಿಬಿ ಅಧ್ಯಕ್ಷ ಝಕಾ ಅಶ್ರಫ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸುವ ಮೂಲಕ ಅಧಿಕೃತವಾಗಿ ಮುಖ್ಯ ಆಯ್ಕೆಗಾರ ಸ್ಥಾನದಿಂದ ಕೆಳಗಿಳಿದಿದ್ದಾರೆ.

‘ರಾಷ್ಟ್ರೀಯ ಪುರುಷರ ಆಯ್ಕೆ ಸಮಿತಿ ಮತ್ತು ಜೂನಿಯರ್ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಇಂಜಮಾಮ್ ಉಲ್ ಹಕ್ ರಾಜೀನಾಮೆ ನೀಡಿದ್ದು, ಆಗಸ್ಟ್ 7 2023 ರಂದು ರಾಷ್ಟ್ರೀಯ ಪುರುಷರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಈ ತಿಂಗಳ ಆರಂಭದಲ್ಲಿ ಜೂನಿಯರ್ ಪುರುಷರ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಕೂಡ ನೇಮಕಗೊಂಡಿದ್ದರು" ಎಂದು ಪಿಸಿಬಿ ತಿಳಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net