ಡೆಲ್ಲಿ ಕ್ಯಾಪಿಟಲ್ಸ್‌ಗೆ ಇಂದು ಚೆನ್ನೈ ಸೂಪರ್‌ಕಿಂಗ್ಸ್ ಸವಾಲು

ipl-15 delhi capitals and csk match for web
Published on

ಮುಂಬೈ: ಲೀಗ್‌ನಲ್ಲಿ ಇದುವರೆಗೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್-15ರ ತನ್ನ ನಿರ್ಣಾಯಕ ಹೋರಾಟದಲ್ಲಿ, ಈಗಾಗಲೆ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿರುವ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಟೂರ್ನಿಯಲ್ಲಿ ಡೆಲ್ಲಿ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ ತಲಾ 5ರಲ್ಲಿ ಗೆಲುವು, ಸೋಲು ಕಂಡಿದೆ. ಹಿಂದಿನ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡವನ್ನು ಮಣಿಸುವ ಮೂಲಕ ಪ್ಲೇಆಫ್ ರೇಸ್‌ನಲ್ಲಿ ಉಳಿದಿದೆ. ಡೆಲ್ಲಿ ತಂಡದ ಸ್ಥಿತಿ ಹಗ್ಗದ ಮೇಲಿನ ನಡಿಗೆಯಂತಿದ್ದು, ಗೆಲುವೊಂದೇ ಮಾರ್ಗವಾಗಿದೆ. ಸಿಎಸ್‌ಕೆ ಪಾಲಿಗೆ ಈ ಪಂದ್ಯ ಅನೌಪಚಾರಿಕವಾದರೂ ಅಂಕಪಟ್ಟಿಯಲ್ಲಿ ಕೆಲವೊಂದು ಲೆಕ್ಕಾಚಾರವನ್ನು ಉಲ್ಟಾ ಮಾಡುವ ಅವಕಾಶ ಹೊಂದಿದೆ.

*ಡೆಲ್ಲಿಗೆ ಮಹತ್ವದ ಪಂದ್ಯ

ಹಿಂದಿನ ಪಂದ್ಯದಲ್ಲಿ ಸನ್‌ರೈಸರ್ಸ್‌ ಎದುರು ಭರ್ಜರಿ ಜಯ ದಾಖಲಿಸಿರುವ ಡೆಲ್ಲಿ ಗೆಲುವಿನ ಲಯದಲ್ಲಿ ಮುಂದುವರಿಯುವ ವಿಶ್ವಾಸದಲ್ಲಿದೆ. ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ನಾಯಕ ರಿಷಭ್ ಪಂತ್ ಒಳಗೊಂಡ ಬ್ಯಾಟಿಂಗ್ ಪಡೆ ಉತ್ತಮ ಫಾರ್ಮ್‌ನಲ್ಲಿದೆ. ಡೆಲ್ಲಿ ತಂಡ ಉಳಿದಿರುವ 4 ಪಂದ್ಯಗಳಲ್ಲಿ ಇದೇ ರನ್‌ರೇಟ್‌ನೊಂದಿಗೆ (+0.641) ಗೆಲುವಿನ ನಾಗಾಲೋಟ ಮುಂದುವರಿಸಬೇಕಿದೆ. ಮತ್ತೊಂದೆಡೆ, ಸಿಎಸ್‌ಕೆ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 3 ರಲ್ಲಿ ಗೆದ್ದು, 7 ಸೋಲು ಕಂಡಿದ್ದು, 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಪಂದ್ಯ ಆರಂಭ: ರಾತ್ರಿ 7.30

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ಮುಖಾಮುಖಿ: 26, ಸಿಎಸ್‌ಕೆ: 16, ಡೆಲ್ಲಿ: 10

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net