

ಮುಂಬೈ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಬಲಿಷ್ಠ ನಿರ್ವಹಣೆ ತೋರಿದ ರಾಜಸ್ಥಾನ ರಾಯಲ್ಸ್ ತಂಡ ಐಪಿಎಲ್-15ರ ತನ್ನ ಕಡೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿ ಪ್ಲೇಆಫ್ ಹಂತಕ್ಕೇರಿತು. ಉತ್ತಮ ರನ್‌ರೇಟ್ ಲೆಕ್ಕಾಚಾರದಲ್ಲಿ ಲಖನೌ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು. ಮತ್ತೊಂದೆಡೆ, ಹಾಲಿ ಚಾಂಪಿಯನ್ ಸಿಎಸ್‌ಕೆ ಸೋಲಿನೊಂದಿಗೆ ಲೀಗ್‌ಗೆ ವಿದಾಯ ಹೇಳಿತು.
ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ಎಡಗೈ ಬ್ಯಾಟರ್ ಮೊಯಿನ್ ಅಲಿ (93ರನ್, 57 ಎಸೆತ, 13 ಬೌಂಡರಿ, 3 ಸಿಕ್ಸರ್) ಏಕಾಂಗಿ ನಿರ್ವಹಣೆಯಿಂದ 6 ವಿಕೆಟ್‌ಗೆ 150 ರನ್ ಕಲೆಹಾಕಿತು. ಪ್ರತಿಯಾಗಿ ಯಶಸ್ವಿ ಜೈಸ್ವಾಲ್ (59ರನ್, 44 ಎಸೆತ, 8 ಬೌಂಡರಿ, 1 ಸಿಕ್ಸರ್) ಹಾಗೂ ಆರ್.ಅಶ್ವಿನ್ (40*ರನ್, 23 ಎಸೆತ, 2 ಬೌಂಡರಿ, 3 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ನೆರವಿನಿಂದ 19.4 ಓವರ್‌ಗಳಲ್ಲಿ 5 ವಿಕೆಟ್‌ಗೆ 151 ರನ್‌ಗಳಿಸಿ ಗೆಲುವಿನ ನಗೆ ಬೀರಿತು.