ಗುಜರಾತ್ ಟೈಟಾನ್ಸ್ ಅಬ್ಬರಕ್ಕೆ ಬೆದರಿದ ರಾಜಸ್ಥಾನ ರಾಯಲ್ಸ್

wed collague
Published on

ಮುಂಬೈ: ನಾಯಕ ಹಾರ್ದಿಕ್ ಪಾಂಡ್ಯ (87*ರನ್, 52 ಎಸೆತ, 8 ಬೌಂಡರಿ, 4 ಸಿಕ್ಸರ್, 18ಕ್ಕೆ 1) ಆಲ್ರೌಂಡ್ ನಿರ್ವಹಣೆ ಹಾಗೂ ವೇಗಿ ಲಾಕಿ ಫರ್ಗ್ಯುಸನ್ (23ಕ್ಕೆ 3) ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್-15ರ ಪಂದ್ಯದಲಿ 37 ರನ್‌ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಹ್ಯಾಟ್ರಿಕ್ ಗೆಲುವಿನ ಬಳಿಕ ಹಿಂದಿನ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದ ಗುಜರಾತ್ ತಂಡ ಗೆಲುವಿನ ಲಯಕ್ಕೆ ಮರಳಿತು.

ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಆರಂಭಿಕ ಆಘಾತದ ನಡುವೆಯೂ ಹಾರ್ದಿಕ್ ಪಾಂಡ್ಯ, ಕನ್ನಡಿಗ ಅಭಿನವ್ ಮನೋಹರ್ (43ರನ್, 28 ಎಸೆತ, 4 ಬೌಂಡರಿ, 2 ಸಿಕ್ಸರ್) ಹಾಗೂ ಡೇವಿಡ್ ಮಿಲ್ಲರ್ (31*ರನ್, 14 ಎಸೆತ, 5 ಬೌಂಡರಿ, 1 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಲವಾಗಿ 4 ವಿಕೆಟ್‌ಗೆ 192 ರನ್ ಕಲೆಹಾಕಿತು. ಪ್ರತಿಯಾಗಿ ಜೋಸ್ ಬಟ್ಲರ್ (54ರನ್, 24 ಎಸೆತ, 8 ಬೌಂಡರಿ, 3 ಸಿಕ್ಸರ್) ಬಿರುಸಿನ ಆರಂಭದ ನಡುವೆಯೂ 9 ವಿಕೆಟ್‌ಗೆ 155 ರನ್‌ಗಳಿಸಲಷ್ಟೇ ಶಕ್ತವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net