ಮಾಜಿ ತಂಡದ ಎದುರು ಅಬ್ಬರಿಸಿದ ಡೇವಿಡ್ ವಾರ್ನರ್; ಸನ್‌ರೈಸರ್ಸ್‌ ಎದುರು ಡೆಲ್ಲಿಗೆ ಭರ್ಜರಿ ಜಯ

ipl-15 dc and srh match for web
Published on

ಮುಂಬೈ: ಸ್ಫೋಟಕ ಬ್ಯಾಟರ್ ಡೇವಿಡ್ ವಾರ್ನರ್ (92*ರನ್, 58 ಎಸೆತ, 12 ಬೌಂಡರಿ, 3 ಸಿಕ್ಸರ್) ಹಾಗೂ ರೊವ್ಮನ್ ಪೊವೆಲ್ (67*ರನ್, 35 ಎಸೆತ, 3 ಬೌಂಡರಿ,6 ಸಿಕ್ಸರ್) ಜೋಡಿಯ ಸ್ಫೋಟಕ ಬ್ಯಾಟಿಂಗ್ ಹಾಗೂ ವೇಗಿ ಖಲೀಲ್ ಅಹಮದ್ (30ಕ್ಕೆ 3) ಮಾರಕ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್-15ರ ಪಂದ್ಯದಲ್ಲಿ 21 ರನ್‌ಗಳಿಂದ ಸನ್‌ರೈಸರ್ಸ್‌ ಹೈದರಾಬಾದ್ ತಂಡವನ್ನು ಸೋಲಿಸಿತು. ಇದರಿಂದ ಲೀಗ್‌ನಲ್ಲಿ 5ನೇ ಗೆಲುವು ದಾಖಲಿಸಿದ ಡೆಲ್ಲಿ ತಂಡ ಪ್ಲೇಆಫ್ ರೇಸ್‌ನಲ್ಲಿ ಉಳಿಯಿತು. ಮತ್ತೊಂದೆಡೆ, ಸನ್‌ರೈಸರ್ಸ್‌ ತಂಡ ಹ್ಯಾಟ್ರಿಕ್ ಸೋಲು ಕಂಡಿತು.

ಬ್ರಬೋರ್ನ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ, ವಾರ್ನರ್-ಪೊವೆಲ್ ಜೋಡಿ 4ನೇ ವಿಕೆಟ್‌ಗೆ ಎದುರಿಸಿದ 66 ಎಸೆತಗಳಲ್ಲಿ 122 ಪೇರಿಸಿದ ಲವಾಗಿ 3 ವಿಕೆಟ್‌ಗೆ 207 ರನ್ ಕಲೆಹಾಕಿತು. ಪ್ರತಿಯಾಗಿ ಸನ್‌ರೈಸರ್ಸ್‌ ತಂಡ ನಿಕೋಲಸ್ ಪೂರನ್ (62ರನ್, 34 ಎಸೆತ, 2 ಬೌಂಡರಿ, 6 ಸಿಕ್ಸರ್) ಪ್ರತಿಹೋರಾಟದ ನಡುವೆಯೂ 8 ವಿಕೆಟ್‌ಗೆ 186 ರನ್ ಗಳಿಸಲಷ್ಟೆ ಶಕ್ತವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net