ಕೆಕೆಆರ್ ತಂಡಕ್ಕೆ ಶರಣಾದ ಧೋನಿ ಬಳಗ

KKR Win
Published on

ಅಬುಧಾಬಿ: ಆರಂಭಿಕ ಬ್ಯಾಟ್ಸ್‌ಮನ್ ರಾಹುಲ್ ತ್ರಿಪಾಠಿ (81ರನ್, 51 ಎಸೆತ, 8 ಬೌಂಡರಿ, 3 ಸಿಕ್ಸರ್) ಏಕಾಂಗಿ ಹೋರಾಟ ಹಾಗೂ ಸ್ಲಾಗ್ ಓವರ್‌ಗಳಲ್ಲಿ ಬೌಲರ್‌ಗಳ ಪ್ರಬಲ ನಿರ್ವಹಣೆ ಲವಾಗಿ ಎರಡು ಬಾರಿ ಚಾಂಪಿಯನ್ ಕೋಲ್ಕತ ನೈಟ್ ರೈಡರ್ಸ್‌ ತಂಡ ಐಪಿಎಲ್-13ರಲ್ಲಿ ಗೆಲುವಿನ ಹಳಿಗೇರಿತು.

ಶೇಖ್ ಜಯೆದ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಬಳಗ 10ರನ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 167 ರನ್‌ಗಳಿಗೆ ಸರ್ವಪತನ ಕಂಡಿತು. ಪ್ರತಿಯಾಗಿ ಶೇನ್ ವ್ಯಾಟ್ಸನ್ (50ರನ್, 40 ಎಸೆತ, 6 ಬೌಂಡರಿ, 1 ಸಿಕ್ಸರ್) ಕಟ್ಟಿದ ಜವಾಬ್ದಾರಿಯುತ ಇನಿಂಗ್ಸ್ ನಡುವೆಯೂ ಸಿಎಸ್‌ಕೆ 5 ವಿಕೆಟ್‌ಗೆ 157 ರನ್ ಗಳಿಸಲಷ್ಟೇ ಶಕ್ತವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net