IPL 2024: ಪಂಜಾಬ್ ವಿರುದ್ದ ಟಾಸ್​ ಗೆದ್ದ ಲಖನೌ ಬ್ಯಾಟಿಂಗ್​ ಆಯ್ಕೆ

crickt
Published on

ಲಖನೌ: 17 ಆವೃತ್ತಿಯ ಟೂರ್ನಿಯಲ್ಲಿ ಇಂದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ. 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ನಿಕೋಲಸ್ ಪೂರನ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ರಸಕ್ತ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಿದ ಒಂದು ಪಂದ್ಯದಲ್ಲಿ 20 ರನ್‌ಗಳ ಸೋಲು ಅನುಭವಿಸಿದ್ದು, ತವರಿನ ಅಂಗಳದಲ್ಲಿ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ಗೆಲುವಿನ ಹಾದಿಗೆ ಮರಳುವ ವಿಶ್ವಾಸದಲ್ಲಿದೆ.

ಲಖನೌ ಪ್ಲೇಯಿಂಗ್ 11: ಕ್ವಿಂಟನ್  ಡಿಕಾಕ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಆಯುಷ್ ಬದೋನಿ, ನಿಕೋಲಸ್ ಪೂರನ್(ನಾಯಕ), ಮಾರ್ಕಸ್ ಸ್ಟೊಯ್ನಿಸ್, ಕ್ರುನಾಲ್ ಪಾಂಡ್ಯ, ರವಿ ಬಿಶ್ನೋಯ್, ಮೊಹ್ಸಿನ್ ಖಾನ್, ಮಯಾಂಗ್ ಯಾದವ್, ಮಣಿಮಾರನ್ ಸಿದ್ದಾರ್ಥ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net