ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯಕ್ಕೂ ಮುನ್ನವೇ RCBಗೆ​ ಶಾಕ್​: ಘರ್ಜಿಸಲು ರೆಡಿಯಾದ ಸ್ಟಾರ್​ ಆಟಗಾರ! Mumbai Indians

Mumbai Indians
Published on

Mumbai Indians: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ಕಠಿಣ ಸಮಯವನ್ನು ಎದುರಿಸುತ್ತಿದೆ. ಈ ಸೀಸನ್​ನಲ್ಲಿ ಇದುವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತಿರುವ ಮುಂಬೈ ತಂಡವು ಪಾಯಿಂಟ್ ಪಟ್ಟಿಯಲ್ಲಿ ಕೆಳಗಿನಿಂದ ಮೂರನೇ ಸ್ಥಾನದಲ್ಲಿದೆ. ಏಪ್ರಿಲ್ 7 ರಂದು ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಮುಂಬೈ ತಂಡವು ಫಾರ್ಮ್‌ನಲ್ಲಿರುವ ಆರ್‌ಸಿಬಿಯನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ತಂಡಕ್ಕೆ ಒಂದು ಒಳ್ಳೆಯ ಸುದ್ದಿ ಸಿಕ್ಕಿದೆ.

ಗಾಯದ ಕಾರಣದಿಂದಾಗಿ ಸ್ವಲ್ಪ ಸಮಯದಿಂದ ಆಟದಿಂದ ಹೊರಗುಳಿದಿದ್ದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ತಂಡವನ್ನು ಮತ್ತೆ ಸೇರಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಇದನ್ನು ಘೋಷಿಸಿದೆ. ಬುಮ್ರಾ ಅವರ ಐಪಿಎಲ್ ಪ್ರಯಾಣಕ್ಕೆ ಸಂಬಂಧಿಸಿದ ವಿಡಿಯೋವನ್ನು ಪೋಸ್ಟ್ ಮಾಡಿ "ಸಿಂಹ ಘರ್ಜಿಸಲು ಸಿದ್ಧವಾಗಿದೆ" ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.

ಈ ವಿಡಿಯೋದಲ್ಲಿ ಬುಮ್ರಾ ಅವರ ಪತ್ನಿ ಸಂಜನಾ ತಮ್ಮ ಮಗ ಅಂಗದ್​ಗೆ ತಂದೆಯ ಐಪಿಎಲ್ ಅನುಭವದ ಬಗ್ಗೆ ವಿವರಿಸುತ್ತಾರೆ. 2013ರಲ್ಲಿ ಐಪಿಎಲ್​ಗೆ ಪದಾರ್ಪಣೆ ಮಾಡಿದ ನಂತರ ಮುಂಬೈ ತಂಡದ ಅನೇಕ ವಿಜಯಗಳಲ್ಲಿ ಬುಮ್ರಾ ಪ್ರಮುಖ ಪಾತ್ರ ವಹಿಸಿದ್ದಾರೆ. ಬುಮ್ರಾ ಮುಂಬೈ ಇಂಡಿಯನ್ಸ್ ಪರ 133 ಪಂದ್ಯಗಳನ್ನು ಆಡಿದ್ದಾರೆ ಮತ್ತು 165 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಸಿಡ್ನಿಯಲ್ಲಿ ನಡೆದ ಅಂತಿಮ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಪಂದ್ಯದ ವೇಳೆ ಬುಮ್ರಾ ಗಾಯದಿಂದ (ಬೆನ್ನಿನ ಸಮಸ್ಯೆ) ಬಳಲುತ್ತಿದ್ದರು. ಪರಿಣಾಮವಾಗಿ, ಅವರು ಚಾಂಪಿಯನ್ಸ್ ಟ್ರೋಫಿಯನ್ನು ತಪ್ಪಿಸಿಕೊಂಡರು. ಆದರೂ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿತು. ಗಾಯದ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಬುಮ್ರಾ ಸುಮಾರು ಎರಡು ತಿಂಗಳ ಕಾಲ ಆಟದಿಂದ ಹೊರಗುಳಿದಿದ್ದರು. ಅವರು ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ವರದಿ ಮಾಡಿಕೊಂಡರು.

ಕೆಲವು ದಿನಗಳ ಕಾಲ ಅಲ್ಲಿ ಪುನರ್ವಸತಿ ಕೇಂದ್ರದಲ್ಲಿದ್ದ ಬುಮ್ರಾ ಇತ್ತೀಚೆಗೆ ಮುಂಬೈ ಇಂಡಿಯನ್ಸ್ ಶಿಬಿರವನ್ನು ಸೇರಿಕೊಂಡರು. ಬುಮ್ರಾ ತಂಡಕ್ಕೆ ಸೇರಿದರೂ, ಏಪ್ರಿಲ್ 7 ರಂದು ನಡೆಯಲಿರುವ ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಅವರು ಲಭ್ಯವಿರುವುದಿಲ್ಲ ಎಂದು ತಿಳಿದುಬಂದಿದೆ. ಬುಮ್ರಾ ವಿಚಾರದಲ್ಲಿ ಅಪಾಯಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದಿರುವ ಬಿಸಿಸಿಐ, ಅವರನ್ನು ಇನ್ನೂ ಕೆಲವು ದಿನಗಳವರೆಗೆ ವೀಕ್ಷಣೆಯಲ್ಲಿಡಲು ಉದ್ದೇಶಿಸಿದೆ ಆರ್​ಸಿಬಿ ವಿರುದ್ಧ ಬುಮ್ರಾ ಆಡಿದರೂ ಅಚ್ಚರಿ ಏನಿಲ್ಲ.

ಏಪ್ರಿಲ್ 13ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಬುಮ್ರಾ ಲಭ್ಯವಾಗುವ ಸಾಧ್ಯತೆಯಿದೆ. ಈ ಸೀಸನ್​ನ ಮೆಗಾ ಹರಾಜಿಗೂ ಮುನ್ನ ಬುಮ್ರಾ ಅವರನ್ನು ಮುಂಬೈ ಇಂಡಿಯನ್ಸ್ 18 ಕೋಟಿ ರೂ.ಗೆ ಉಳಿಸಿಕೊಂಡಿದೆ ಎಂದು ತಿಳಿದಿದೆ. ಈ ಸೀಸನ್​ನಲ್ಲಿ ಬುಮ್ರಾ ಅನುಪಸ್ಥಿತಿ ಮುಂಬೈ ಇಂಡಿಯನ್ಸ್‌ಗೆ ದೊಡ್ಡ ಸಮಸ್ಯೆಯಾಗಿದೆ. ಯುವ ಬೌಲರ್‌ಗಳಾದ ವಿಘ್ನೇಶ್ ಪುತ್ತೂರ್ ಮತ್ತು ಅಶ್ವನಿ ಕುಮಾರ್ ಅವರು ತಮ್ಮ ಪ್ರಯತ್ನಗಳ ಹೊರತಾಗಿಯೂ ಬುಮ್ರಾ ಮಟ್ಟದಲ್ಲಿ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ.

ಹಿರಿಯ ವೇಗಿಗಳಾದ ಟ್ರೆಂಟ್ ಬೌಲ್ಟ್ ಮತ್ತು ದೀಪಕ್ ಚಾಹರ್ ಕೂಡ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ನಿನ್ನೆ ಲಖನೌ ವಿರುದ್ಧದ ಪಂದ್ಯದಲ್ಲಿ, ಹಾರ್ದಿಕ್ ಪಾಂಡ್ಯ ತಮ್ಮ ಪ್ರಯತ್ನಗಳ ಹೊರತಾಗಿಯೂ ಮುಂಬೈ ಇಂಡಿಯನ್ಸ್ ಅನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ವಿಫಲರಾದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net